Text copied!
Bibles in Kannada

ಪ್ರಸ 1:3-9 in Kannada

Help us?

ಪ್ರಸ 1:3-9 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಈ ಲೋಕದಲ್ಲಿ ಮನುಷ್ಯನು ಪಡುವ ಎಲ್ಲಾ ಪ್ರಯಾಸದಿಂದ ಅವನಿಗೆ ಲಾಭವೇನು?
4 ಒಂದು ಸಂತತಿಯು ಹೋಗುವುದು, ಇನ್ನೊಂದು ಸಂತತಿಯು ಬರುವುದು, ಆದರೆ ಭೂಮಿಯು ಶಾಶ್ವತವಾಗಿ ನಿಲ್ಲುವುದು.
5 ಸೂರ್ಯನು ಉದಯಿಸುತ್ತಾನೆ. ಸೂರ್ಯನು ಮುಳುಗುತ್ತಾನೆ. ತಾನು ಉದಯಿಸುವ ಸ್ಥಾನಕ್ಕೆ ಅವಸರವಾಗಿ ಹಿಂತಿರುಗಿ ಹೋಗುತ್ತಾನೆ.
6 ಗಾಳಿಯು ದಕ್ಷಿಣದ ಕಡೆಗೆ ಬೀಸುತ್ತದೆ. ಉತ್ತರದ ಕಡೆಗೆ ತಿರುಗುವುದು. ಅದು ಸುತ್ತುತ್ತಾ ಸುತ್ತುತ್ತಾ ಹೋಗಿ, ಗಾಳಿ ಸುತ್ತಳತೆಯ ಪ್ರಕಾರ ಹಿಂದಿರುಗುತ್ತವೆ.
7 ನದಿಗಳೆಲ್ಲಾ ಸಮುದ್ರಕ್ಕೆ ಹರಿದು ಹೋಗುತ್ತವೆ. ಆದರೂ ಸಮುದ್ರವು ತುಂಬುವುದಿಲ್ಲ. ನದಿಗಳು ಎಲ್ಲಿಂದ ಬಂದಿವೆಯೋ ಅದೇ ಸ್ಥಳಕ್ಕೆ ಹಿಂತಿರುಗುತ್ತವೆ.
8 ಎಲ್ಲಾ ಕಾರ್ಯಗಳು ಪ್ರಯಾಸದಿಂದ ತುಂಬಿದೆ. ಇದನ್ನು ಮನುಷ್ಯನು ವಿವರಿಸಲಾರನು. ನೋಡುವುದರಿಂದ ಕಣ್ಣು ತೃಪ್ತಿಗೊಳ್ಳದು, ಕೇಳುವುದರಿಂದ ಕಿವಿಯು ದಣಿಯದು.
9 ಇದ್ದದ್ದೇ ಇರುವುದು, ನಡೆದದ್ದೇ ನಡೆಯುವುದು. ಸೂರ್ಯನ ಕೆಳಗೆ ಹೊಸದಾದದ್ದು ಯಾವುದೂ ಇಲ್ಲ.
ಪ್ರಸ 1 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019