7ನದಿಗಳೆಲ್ಲಾ ಸಮುದ್ರಕ್ಕೆ ಹರಿದು ಹೋಗುತ್ತವೆ. ಆದರೂ ಸಮುದ್ರವು ತುಂಬುವುದಿಲ್ಲ. ನದಿಗಳು ಎಲ್ಲಿಂದ ಬಂದಿವೆಯೋ ಅದೇ ಸ್ಥಳಕ್ಕೆ ಹಿಂತಿರುಗುತ್ತವೆ.
8ಎಲ್ಲಾ ಕಾರ್ಯಗಳು ಪ್ರಯಾಸದಿಂದ ತುಂಬಿದೆ. ಇದನ್ನು ಮನುಷ್ಯನು ವಿವರಿಸಲಾರನು. ನೋಡುವುದರಿಂದ ಕಣ್ಣು ತೃಪ್ತಿಗೊಳ್ಳದು, ಕೇಳುವುದರಿಂದ ಕಿವಿಯು ದಣಿಯದು.
9ಇದ್ದದ್ದೇ ಇರುವುದು, ನಡೆದದ್ದೇ ನಡೆಯುವುದು. ಸೂರ್ಯನ ಕೆಳಗೆ ಹೊಸದಾದದ್ದು ಯಾವುದೂ ಇಲ್ಲ.
10‘ನೋಡು, ಇದು ಹೊಸದು’ ಎಂದು ಯಾವ ವಿಷಯದಲ್ಲಾದರೂ ಹೇಳಬಹುದೋ? ನಮಗಿಂತ ಮೊದಲು ಇದ್ದದ್ದು, ಪುರಾತನ ಕಾಲದಿಂದ ಇದ್ದದ್ದೇ.
11ಪುರಾತನ ಕಾಲದಲ್ಲಿ ನಡೆದ ಸಂಗತಿಗಳ ಜ್ಞಾಪಕವು ಈಗಿನ ಜನರಿಗೆ ಇಲ್ಲ. ಮುಂದಿನ ಕಾಲದಲ್ಲಿ ನಡೆಯುವ ಸಂಗತಿಗಳ ಜ್ಞಾಪಕವು ಮುಂದಿನ ಕಾಲದ ಜನರಿಗೆ ಇರುವುದಿಲ್ಲ.”