Text copied!
Bibles in Kannada

ಪ್ರಸ 1:9-15 in Kannada

Help us?

ಪ್ರಸ 1:9-15 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಇದ್ದದ್ದೇ ಇರುವುದು, ನಡೆದದ್ದೇ ನಡೆಯುವುದು. ಸೂರ್ಯನ ಕೆಳಗೆ ಹೊಸದಾದದ್ದು ಯಾವುದೂ ಇಲ್ಲ.
10 ‘ನೋಡು, ಇದು ಹೊಸದು’ ಎಂದು ಯಾವ ವಿಷಯದಲ್ಲಾದರೂ ಹೇಳಬಹುದೋ? ನಮಗಿಂತ ಮೊದಲು ಇದ್ದದ್ದು, ಪುರಾತನ ಕಾಲದಿಂದ ಇದ್ದದ್ದೇ.
11 ಪುರಾತನ ಕಾಲದಲ್ಲಿ ನಡೆದ ಸಂಗತಿಗಳ ಜ್ಞಾಪಕವು ಈಗಿನ ಜನರಿಗೆ ಇಲ್ಲ. ಮುಂದಿನ ಕಾಲದಲ್ಲಿ ನಡೆಯುವ ಸಂಗತಿಗಳ ಜ್ಞಾಪಕವು ಮುಂದಿನ ಕಾಲದ ಜನರಿಗೆ ಇರುವುದಿಲ್ಲ.”
12 ಪ್ರಸಂಗಿಯಾದ ನಾನು ಯೆರೂಸಲೇಮಿನಲ್ಲಿ ಇಸ್ರಾಯೇಲರಿಗೆ ಅರಸನಾಗಿದ್ದೆನು.
13 ಆಕಾಶದ ಕೆಳಗಡೆ ನಡೆಯುವ ಎಲ್ಲಾ ಕೆಲಸಗಳನ್ನು ಜ್ಞಾನದಿಂದ ವಿಚಾರಿಸಿ ವಿಮರ್ಶಿಸುವುದಕ್ಕೆ ನನ್ನ ಮನಸ್ಸನ್ನು ಇಟ್ಟೆನು. ದೇವರು ಮನುಷ್ಯರ ಮೇಲೆ ನೇಮಿಸಿರುವ ಕೆಲಸವೆಲ್ಲಾ ಬಹು ಪ್ರಯಾಸವೇ.
14 ಲೋಕದಲ್ಲಿ ನಡೆಯುವ ಎಲ್ಲಾ ಕೆಲಸಗಳನ್ನು ನೋಡಿದ್ದೇನೆ. ಆಹಾ, ಗಾಳಿಯನ್ನು ಹಿಂದಟ್ಟುವ ಹಾಗೆ ಸಮಸ್ತವೂ ವ್ಯರ್ಥ.
15 ವಕ್ರವಾದದ್ದನ್ನು ಸರಿಮಾಡುವುದಕ್ಕೆ ಆಗುವುದಿಲ್ಲ! ಇಲ್ಲದ್ದನ್ನು ಲೆಕ್ಕಿಸುವುದಕ್ಕೆ ಅಸಾಧ್ಯ!
ಪ್ರಸ 1 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019