1ನಾನು ಮನಸ್ಸಿನಲ್ಲಿ, “ಈಗ ಬಾ, ನಾನು ನಿನ್ನನ್ನು ಸಂತೋಷದ ಮೂಲಕ ಪರೀಕ್ಷಿಸುವೆನು. ಸುಖವನ್ನು ಅನುಭವಿಸು” ಅಂದುಕೊಂಡೆನು. ಆಹಾ! ಇದು ವ್ಯರ್ಥವೇ.
2“ನಗುವುದು ಹುಚ್ಚುತನ, ಸಂತೋಷದಿಂದ ಏನನ್ನು ಸಾಧಿಸುವೆನು?” ಅಂದುಕೊಂಡೆನು.
3ಆಕಾಶದ ಕೆಳಗೆ ಮನುಷ್ಯರ ಅಲ್ಪಾಯುಷ್ಯದಲ್ಲಿ ಏನು ಮಾಡುವುದು ಒಳ್ಳೆಯದೆಂದು ನಾನು ತಿಳಿದುಕೊಳ್ಳುವುದಕ್ಕಾಗಿ, ನನ್ನ ಮನಸ್ಸು ಜ್ಞಾನದಿಂದಿರುವಾಗಲೇ ದೇಹವನ್ನು ದ್ರಾಕ್ಷಾರಸದಿಂದ ಸಂತೋಷದಲ್ಲಿ ಇಡುವುದಕ್ಕೂ, ಬುದ್ಧಿಹೀನತೆಯನ್ನು ಅವಲಂಬಿಸುವುದಕ್ಕೂ ಮನಸ್ಸಿನಲ್ಲಿ ವಿಚಾರಮಾಡಿಕೊಂಡೆನು.