Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಪ್ರಸ - ಪ್ರಸ 2

ಪ್ರಸ 2:10-13

Help us?
Click on verse(s) to share them!
10ನನ್ನ ಕಣ್ಣು ಬಯಸಿದ್ದೆಲ್ಲವನ್ನು, ಅದಕ್ಕೆ ನಾನು ಒಪ್ಪಿಸದೆ ಬಿಡಲಿಲ್ಲ. ಯಾವ ಸಂತೋಷವನ್ನು ಅನುಭವಿಸುವುದಕ್ಕೂ ನನ್ನ ಹೃದಯವನ್ನು ತಡೆಯಲಿಲ್ಲ. ಏಕೆಂದರೆ ನನ್ನ ಹೃದಯವು ನಾನು ನಡಿಸುವ ಕಾರ್ಯಗಳಲ್ಲಿ ಹರ್ಷಿಸುತ್ತಿತ್ತು. ನನ್ನ ಪ್ರಯಾಸದಿಂದ ನನಗೆ ದೊರೆತ ಫಲವು ಇದೆ.
11ಆಗ ನನ್ನ ಕೈಯಿಂದ ನಡೆಸಿದ ಎಲ್ಲಾ ಕೆಲಸಗಳನ್ನೂ, ನಾನು ಪಟ್ಟ ಪ್ರಯಾಸಗಳನ್ನೂ ಗಮನವಿಟ್ಟು ಪರಿಶೀಲಿಸಿದೆ, ಆಹಾ ಗಾಳಿಯನ್ನು ಹಿಂದಟ್ಟಿದ ಹಾಗೆ ಸಮಸ್ತವೂ ವ್ಯರ್ಥವಾಯಿತು. ಸೂರ್ಯನ ಕೆಳಗೆ ಯಾವ ಲಾಭವೂ ಕಾಣಲಿಲ್ಲ.
12ಜ್ಞಾನವನ್ನೂ ನೋಡುವುದಕ್ಕೆ ತಿರುಗಿಕೊಂಡೆನು, ಮರುಳುತನವನ್ನೂ ಬುದ್ಧಿಹೀನತೆಯನ್ನೂ ನೋಡುವುದಕ್ಕೆ ತಿರುಗಿಕೊಂಡೆನು. ರಾಜನ ಪ್ರಯತ್ನವೇ ಹೀಗಾದ ಮೇಲೆ ಮತ್ತೊಬ್ಬನಿಂದ ಏನಾದೀತು? ಆದದ್ದೇ ಆಗುತ್ತದೆ ಎಂದುಕೊಂಡೆ.
13ಜ್ಞಾನವು ಮೂಢತ್ವಕ್ಕಿಂತ ಶ್ರೇಷ್ಠವೆಂದು ಬೆಳಕು ಕತ್ತಲಿಗಿಂತ ಶ್ರೇಷ್ಠವಾಗಿರುವುದೆಂದು ಗೋಚರವಾಯಿತು.

Read ಪ್ರಸ 2ಪ್ರಸ 2
Compare ಪ್ರಸ 2:10-13ಪ್ರಸ 2:10-13