Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಪ್ರಸ - ಪ್ರಸ 2

ಪ್ರಸ 2:12-26

Help us?
Click on verse(s) to share them!
12ಜ್ಞಾನವನ್ನೂ ನೋಡುವುದಕ್ಕೆ ತಿರುಗಿಕೊಂಡೆನು, ಮರುಳುತನವನ್ನೂ ಬುದ್ಧಿಹೀನತೆಯನ್ನೂ ನೋಡುವುದಕ್ಕೆ ತಿರುಗಿಕೊಂಡೆನು. ರಾಜನ ಪ್ರಯತ್ನವೇ ಹೀಗಾದ ಮೇಲೆ ಮತ್ತೊಬ್ಬನಿಂದ ಏನಾದೀತು? ಆದದ್ದೇ ಆಗುತ್ತದೆ ಎಂದುಕೊಂಡೆ.
13ಜ್ಞಾನವು ಮೂಢತ್ವಕ್ಕಿಂತ ಶ್ರೇಷ್ಠವೆಂದು ಬೆಳಕು ಕತ್ತಲಿಗಿಂತ ಶ್ರೇಷ್ಠವಾಗಿರುವುದೆಂದು ಗೋಚರವಾಯಿತು.
14ಜ್ಞಾನಿಯ ಕಣ್ಣು ಅವನ ತಲೆಯಲ್ಲಿರುವುದು ಮೂಢನು ಕತ್ತಲಲ್ಲಿ ನಡೆಯುವನು. ಇವರಿಬ್ಬರಿಗೂ ಒಂದೇ ಗತಿಯೆಂದು ನನಗೆ ಕಂಡು ಬಂದಿತು.
15ಆಗ ನಾನು ನನ್ನ ಹೃದಯದಲ್ಲಿ, “ಮೂಢನಿಗೆ ಸಂಭವಿಸುವ ಗತಿಯು, ನನಗೂ ಸಂಭವಿಸುವುದು. ನನ್ನ ಹೆಚ್ಚು ಜ್ಞಾನದಿಂದ ಲಾಭವೇನು?” ಇದೂ ವ್ಯರ್ಥವೆಂದು ನನ್ನ ಹೃದಯದಲ್ಲಿ ಅಂದುಕೊಂಡೆನು.
16ಏಕೆಂದರೆ ಮೂಢನು ಹೇಗೋ ಹಾಗೆಯೇ ಜ್ಞಾನಿಯೂ ಬಹಳ ದಿನಗಳವರೆಗೆ ಮರೆತುಹೋಗುವನು. ಈಗಿನ ಜನರು ಮುಂದಿನ ಕಾಲದೊಳಗಾಗಿಯೇ ಮರೆತುಹೋಗುವರು. ಆಹಾ! ಮೂಢನಂತೆ ಜ್ಞಾನಿಯೂ ಸಾಯುವನು.
17ಲೋಕ ವ್ಯವಹಾರವು ಕೆಟ್ಟದ್ದೆಂದು ನನಗೆ ಕಂಡುಬಂದದ್ದರಿಂದ ಜೀವವೇ ಅಸಹ್ಯವಾಗಿ ತೋರಿತು. ಗಾಳಿಯನ್ನು ಹಿಂದಟ್ಟಿದ ಹಾಗೆ ಸಮಸ್ತವೂ ವ್ಯರ್ಥ.
18ನನ್ನ ಪ್ರಯಾಸದ ಫಲವನ್ನು ಮುಂದಿನವನಿಗೆ ಬಿಟ್ಟುಬಿಡಬೇಕೆಂದು ನಾನು ಲೋಕದಲ್ಲಿ ಪಟ್ಟ ಪ್ರಯಾಸಕ್ಕೆ ಬೇಸರಗೊಂಡೆನು.
19ಅವನು ಜ್ಞಾನಿಯೋ ಅಥವಾ ಮೂಢನೋ ಯಾರಿಗೆ ಗೊತ್ತು? ಎಂಥವನಾದರೂ ನಾನು ಲೋಕದೊಳಗೆ ಯಾವುದರಲ್ಲಿ ಜ್ಞಾನವನ್ನೂ, ಪ್ರಯಾಸವನ್ನೂ ವೆಚ್ಚಮಾಡಿದ್ದೇನೋ ಅದರ ಮೇಲೆ ದೊರೆತನಮಾಡುವೆನು. ಇದೂ ವ್ಯರ್ಥವೇ.
20ಹೀಗಿರಲು ನಾನು ಲೋಕದಲ್ಲಿ ಪ್ರಯಾಸಪಟ್ಟ ಕೆಲಸದ ವಿಷಯವಾಗಿ ನಿರಾಶೆಗೊಳಗಾದೆನು.
21ಒಬ್ಬನು ಜ್ಞಾನದಿಂದಲೂ, ತಿಳಿವಳಿಕೆಯಿಂದಲೂ ತನ್ನ ಕೆಲಸವನ್ನು ನಡೆಸಿ ಸಿದ್ಧಿಗೆ ತಂದ ಮೇಲೆ ಆ ಕೆಲಸದಲ್ಲಿ ಪ್ರಯಾಸಪಡದವನಿಗೆ ಅದರ ಫಲವನ್ನು ಭಾಧ್ಯತೆಯಾಗಿ ಬಿಡಬೇಕಾಯಿತು. ಇದು ಸಹ ವ್ಯರ್ಥವೂ, ಕೇವಲ ಅನ್ಯಾಯವೂ ಆಗಿದೆ.
22ಲೋಕದಲ್ಲಿ ಮನುಷ್ಯನು ಹೃದಯಪೂರ್ವಕವಾಗಿ ಪಡುವ ಪ್ರಯಾಸದಿಂದ ಅವನಿಗೆ ಸಿಗುವ ಲಾಭವಾದರೂ ಏನು?
23ಅವನ ದಿನಗಳೆಲ್ಲಾ ವ್ಯಸನವೇ. ಅವನ ಕೆಲಸವು ತೊಂದರೆಯೇ. ರಾತ್ರಿಯಲ್ಲಿಯೂ ಅವನ ಮನಸ್ಸಿಗೆ ವಿಶ್ರಾಂತಿಯಿಲ್ಲ. ಇದೂ ಸಹ ವ್ಯರ್ಥವೇ.
24ಅನ್ನ ಪಾನಗಳನ್ನು ತೆಗೆದುಕೊಂಡು ತನ್ನ ಪ್ರಯಾಸದಲ್ಲಿಯೂ ಸುಖವನ್ನು ಅನುಭವಿಸುವುದಕ್ಕಿಂತ ಇನ್ನೇನೂ ಮನುಷ್ಯನಿಗೆ ಮೇಲಿಲ್ಲ. ಇದು ದೇವರಿಂದಾಯಿತೆಂಬುದನ್ನು ಕಂಡುಕೊಂಡೆನು.
25ಆತನಿಲ್ಲದೆ ಯಾರು ಭೋಜನ ಮಾಡಿ ಸುಖವನ್ನು ಅನುಭವಿಸುವರು?
26ದೇವರು ತಾನು ಮೆಚ್ಚಿದವನಿಗೆ ಜ್ಞಾನವನ್ನೂ, ತಿಳಿವಳಿಕೆಯನ್ನೂ, ಸಂತೋಷವನ್ನೂ ದಯಪಾಲಿಸುತ್ತಾನೆ. ಆದರೆ ದೇವರ ದೃಷ್ಟಿಯಲ್ಲಿ ಒಳ್ಳೆಯವನಿಗೆ ಕೊಡುವುದಕ್ಕಾಗಿ ಕೂಡಿಸಿ ಒದಗಿಸುವಂತೆ ಪಾಪಿಗಾದರೋ ಪ್ರಯಾಸವನ್ನೇ ಕೊಡುತ್ತಾನೆ. ಇದು ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೇ.

Read ಪ್ರಸ 2ಪ್ರಸ 2
Compare ಪ್ರಸ 2:12-26ಪ್ರಸ 2:12-26