Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಪ್ರಸ - ಪ್ರಸ 2

ಪ್ರಸ 2:15-19

Help us?
Click on verse(s) to share them!
15ಆಗ ನಾನು ನನ್ನ ಹೃದಯದಲ್ಲಿ, “ಮೂಢನಿಗೆ ಸಂಭವಿಸುವ ಗತಿಯು, ನನಗೂ ಸಂಭವಿಸುವುದು. ನನ್ನ ಹೆಚ್ಚು ಜ್ಞಾನದಿಂದ ಲಾಭವೇನು?” ಇದೂ ವ್ಯರ್ಥವೆಂದು ನನ್ನ ಹೃದಯದಲ್ಲಿ ಅಂದುಕೊಂಡೆನು.
16ಏಕೆಂದರೆ ಮೂಢನು ಹೇಗೋ ಹಾಗೆಯೇ ಜ್ಞಾನಿಯೂ ಬಹಳ ದಿನಗಳವರೆಗೆ ಮರೆತುಹೋಗುವನು. ಈಗಿನ ಜನರು ಮುಂದಿನ ಕಾಲದೊಳಗಾಗಿಯೇ ಮರೆತುಹೋಗುವರು. ಆಹಾ! ಮೂಢನಂತೆ ಜ್ಞಾನಿಯೂ ಸಾಯುವನು.
17ಲೋಕ ವ್ಯವಹಾರವು ಕೆಟ್ಟದ್ದೆಂದು ನನಗೆ ಕಂಡುಬಂದದ್ದರಿಂದ ಜೀವವೇ ಅಸಹ್ಯವಾಗಿ ತೋರಿತು. ಗಾಳಿಯನ್ನು ಹಿಂದಟ್ಟಿದ ಹಾಗೆ ಸಮಸ್ತವೂ ವ್ಯರ್ಥ.
18ನನ್ನ ಪ್ರಯಾಸದ ಫಲವನ್ನು ಮುಂದಿನವನಿಗೆ ಬಿಟ್ಟುಬಿಡಬೇಕೆಂದು ನಾನು ಲೋಕದಲ್ಲಿ ಪಟ್ಟ ಪ್ರಯಾಸಕ್ಕೆ ಬೇಸರಗೊಂಡೆನು.
19ಅವನು ಜ್ಞಾನಿಯೋ ಅಥವಾ ಮೂಢನೋ ಯಾರಿಗೆ ಗೊತ್ತು? ಎಂಥವನಾದರೂ ನಾನು ಲೋಕದೊಳಗೆ ಯಾವುದರಲ್ಲಿ ಜ್ಞಾನವನ್ನೂ, ಪ್ರಯಾಸವನ್ನೂ ವೆಚ್ಚಮಾಡಿದ್ದೇನೋ ಅದರ ಮೇಲೆ ದೊರೆತನಮಾಡುವೆನು. ಇದೂ ವ್ಯರ್ಥವೇ.

Read ಪ್ರಸ 2ಪ್ರಸ 2
Compare ಪ್ರಸ 2:15-19ಪ್ರಸ 2:15-19