Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಪ್ರಸ - ಪ್ರಸ 2

ಪ್ರಸ 2:2-10

Help us?
Click on verse(s) to share them!
2“ನಗುವುದು ಹುಚ್ಚುತನ, ಸಂತೋಷದಿಂದ ಏನನ್ನು ಸಾಧಿಸುವೆನು?” ಅಂದುಕೊಂಡೆನು.
3ಆಕಾಶದ ಕೆಳಗೆ ಮನುಷ್ಯರ ಅಲ್ಪಾಯುಷ್ಯದಲ್ಲಿ ಏನು ಮಾಡುವುದು ಒಳ್ಳೆಯದೆಂದು ನಾನು ತಿಳಿದುಕೊಳ್ಳುವುದಕ್ಕಾಗಿ, ನನ್ನ ಮನಸ್ಸು ಜ್ಞಾನದಿಂದಿರುವಾಗಲೇ ದೇಹವನ್ನು ದ್ರಾಕ್ಷಾರಸದಿಂದ ಸಂತೋಷದಲ್ಲಿ ಇಡುವುದಕ್ಕೂ, ಬುದ್ಧಿಹೀನತೆಯನ್ನು ಅವಲಂಬಿಸುವುದಕ್ಕೂ ಮನಸ್ಸಿನಲ್ಲಿ ವಿಚಾರಮಾಡಿಕೊಂಡೆನು.
4ನಾನು ಮಹತ್ಕಾರ್ಯಗಳನ್ನು ನಡೆಸಿದೆನು. ಮನೆಗಳನ್ನು ಕಟ್ಟಿಕೊಂಡೆನು ಮತ್ತು ದ್ರಾಕ್ಷಿತೋಟಗಳನ್ನು ನೆಟ್ಟನು.
5ತೋಟಗಳನ್ನೂ ಮತ್ತು ಉದ್ಯಾನವನಗಳನ್ನೂ ಮಾಡಿಸಿ; ಅವುಗಳಲ್ಲಿ ಸಕಲ ವಿಧವಾದ ಫಲವೃಕ್ಷಗಳನ್ನು ನೆಟ್ಟೆನು.
6ಬೆಳೆಯುವ ಗಿಡಗಳ ತೋಪುಗಳಿಗೆ ನೀರು ಹಾಯಿಸುವುದಕ್ಕಾಗಿ ಕುಂಟೆಗಳನ್ನು ತೋಡಿಸಿದೆನು.
7ಗಂಡು ಮತ್ತು ಹೆಣ್ಣಾಳುಗಳನ್ನು ಕೊಂಡುಕೊಂಡೆನು; ನನ್ನ ಅರಮನೆಯಲ್ಲಿ ಇವರಿಂದ ಗುಲಾಮರು ಹುಟ್ಟಿದರು. ಇದಲ್ಲದೆ ಯೆರೂಸಲೇಮಿನಲ್ಲಿ ಹಿಂದೆ ಇದ್ದವರೆಲ್ಲರಿಗಿಂತಲೂ ನಾನು ಬಹಳ ಸಂಪತ್ತುವುಳ್ಳವನಾಗಿ ದನಕುರಿಗಳ ಮಂದೆಯನ್ನು ಹೊಂದಿದೆನು.
8ನಾನು ಬೆಳ್ಳಿಬಂಗಾರಗಳನ್ನೂ ಅರಸರ ಮತ್ತು ಪ್ರಾಂತ್ಯಗಳ ಕಪ್ಪವನ್ನೂ ಸಂಗ್ರಹಿಸಿಕೊಂಡೆನು. ಗಾಯಕ, ಗಾಯಕಿಯರನ್ನು ಮತ್ತು ಮನುಷ್ಯರಿಗೆ ಭೋಗ್ಯರಾದ ಅನೇಕ ಸ್ತ್ರೀಯರನ್ನು ಸಂಪಾದಿಸಿಕೊಂಡೆನು.
9ಹೀಗೆ ಯೆರೂಸಲೇಮಿನಲ್ಲಿ ಹಿಂದೆ ಇದ್ದವರೆಲ್ಲರಿಗಿಂತಲೂ ಹೆಚ್ಚು ಅಭಿವೃದ್ಧಿಹೊಂದಿ ದೊಡ್ಡವನಾದೆನು. ಇದಲ್ಲದೆ ನನ್ನ ಜ್ಞಾನವು ನನ್ನಲ್ಲಿ ನೆಲೆಯಾಗಿತ್ತು.
10ನನ್ನ ಕಣ್ಣು ಬಯಸಿದ್ದೆಲ್ಲವನ್ನು, ಅದಕ್ಕೆ ನಾನು ಒಪ್ಪಿಸದೆ ಬಿಡಲಿಲ್ಲ. ಯಾವ ಸಂತೋಷವನ್ನು ಅನುಭವಿಸುವುದಕ್ಕೂ ನನ್ನ ಹೃದಯವನ್ನು ತಡೆಯಲಿಲ್ಲ. ಏಕೆಂದರೆ ನನ್ನ ಹೃದಯವು ನಾನು ನಡಿಸುವ ಕಾರ್ಯಗಳಲ್ಲಿ ಹರ್ಷಿಸುತ್ತಿತ್ತು. ನನ್ನ ಪ್ರಯಾಸದಿಂದ ನನಗೆ ದೊರೆತ ಫಲವು ಇದೆ.

Read ಪ್ರಸ 2ಪ್ರಸ 2
Compare ಪ್ರಸ 2:2-10ಪ್ರಸ 2:2-10