7 ಗಂಡು ಮತ್ತು ಹೆಣ್ಣಾಳುಗಳನ್ನು ಕೊಂಡುಕೊಂಡೆನು; ನನ್ನ ಅರಮನೆಯಲ್ಲಿ ಇವರಿಂದ ಗುಲಾಮರು ಹುಟ್ಟಿದರು. ಇದಲ್ಲದೆ ಯೆರೂಸಲೇಮಿನಲ್ಲಿ ಹಿಂದೆ ಇದ್ದವರೆಲ್ಲರಿಗಿಂತಲೂ ನಾನು ಬಹಳ ಸಂಪತ್ತುವುಳ್ಳವನಾಗಿ ದನಕುರಿಗಳ ಮಂದೆಯನ್ನು ಹೊಂದಿದೆನು.
8 ನಾನು ಬೆಳ್ಳಿಬಂಗಾರಗಳನ್ನೂ ಅರಸರ ಮತ್ತು ಪ್ರಾಂತ್ಯಗಳ ಕಪ್ಪವನ್ನೂ ಸಂಗ್ರಹಿಸಿಕೊಂಡೆನು. ಗಾಯಕ, ಗಾಯಕಿಯರನ್ನು ಮತ್ತು ಮನುಷ್ಯರಿಗೆ ಭೋಗ್ಯರಾದ ಅನೇಕ ಸ್ತ್ರೀಯರನ್ನು ಸಂಪಾದಿಸಿಕೊಂಡೆನು.