17ಆಗ ನಾನು ಮನಸ್ಸಿನಲ್ಲಿ, “ದೇವರು ನೀತಿವಂತನಿಗೂ, ಅನೀತಿವಂತನಿಗೂ ನ್ಯಾಯತೀರಿಸುವನು. ಆತನ ನ್ಯಾಯಕ್ರಮಗಳಿಗೂ, ಎಲ್ಲಾ ಕೆಲಸಕಾರ್ಯಗಳಿಗೂ ತಕ್ಕ ಸಮಯ ಉಂಟು” ಎಂದು ಅಂದುಕೊಂಡೆನು.
18ನಾನು ನನ್ನ ಮನಸ್ಸಿನಲ್ಲಿ ಹೀಗೆ ಯೋಚಿಸಿದೆನು, “ದೇವರು ಮನುಷ್ಯರನ್ನು ಪರೀಕ್ಷಿಸಿ, ಅವರು ಪಶುಗಳಿಗೆ ಸಮಾನರು ಎಂಬುದನ್ನು ತೋರಿಸುತ್ತಾನೆ.”
19ಮನುಷ್ಯನ ಗತಿಯೂ ಪಶುವಿನ ಗತಿಯೂ ಒಂದೇ. ಪಶುವಿಗೆ ಸಾವು ಬರುವ ಹಾಗೆ ಮನುಷ್ಯನಿಗೂ ಬರುವುದು. ಎಲ್ಲಕ್ಕೂ ಪ್ರಾಣ ಒಂದೇ. ಮನುಷ್ಯನು ಪಶುವಿಗಿಂತ ಶ್ರೇಷ್ಠನಲ್ಲ. ಎಲ್ಲವು ವ್ಯರ್ಥವೇ.
20ಎಲ್ಲಾ ಪ್ರಾಣಿಗಳು ಒಂದೇ ಸ್ಥಳಕ್ಕೆ ಹೋಗುವವು. ಎಲ್ಲವು ಮಣ್ಣಿನಿಂದಾದವು. ಎಲ್ಲವೂ ಮಣ್ಣಿಗೆ ಪುನಃ ಸೇರುವವು.
21ಮನುಷ್ಯನ ಆತ್ಮವು ಮೇಲಕ್ಕೆ ಏರುತ್ತದೋ, ಪಶುವಿನ ಆತ್ಮವು ಕೆಳಕ್ಕೆ ಇಳಿದು ಭೂಮಿಗೆ ಸೇರುತ್ತದೋ ಯಾರಿಗೆ ಗೊತ್ತು?
22ಈ ಪ್ರಕಾರ ನಾನು ಯೋಚಿಸಿ ಮನುಷ್ಯನು ತನ್ನ ಕಾರ್ಯಗಳಲ್ಲಿ ಉಲ್ಲಾಸಗೊಳ್ಳುವುದಕ್ಕಿಂತ ಅವನಿಗೆ ಯಾವ ಮೇಲೂ ಇಲ್ಲ. ಇದೇ ಅವನ ಪಾಲು ಎಂದು ಗ್ರಹಿಸಿಕೊಂಡೆನು. ಜೀವಮಾನದ ನಂತರ ಸಂಭವಿಸುವವುಗಳನ್ನು ನೋಡುವುದಕ್ಕೆ ಮನುಷ್ಯನನ್ನು ಯಾರು ಪುನಃ ಬರಮಾಡುವರು?