3ಕೊಲ್ಲುವ ಸಮಯ, ಸ್ವಸ್ಥಮಾಡುವ ಸಮಯ ಕೆಡುವಿಬಿಡುವ ಸಮಯ, ಕಟ್ಟುವ ಸಮಯ,
4ಅಳುವ ಸಮಯ, ನಗುವ ಸಮಯ, ಗೋಳಾಡುವ ಸಮಯ, ಕುಣಿದಾಡುವ ಸಮಯ,
5ಕಲ್ಲುಗಳನ್ನು ಚೆಲ್ಲುವ ಸಮಯ, ಕಲ್ಲುಗಳನ್ನು ಕೂಡಿಸುವ ಸಮಯ, ಅಪ್ಪಿಕೊಳ್ಳುವ ಸಮಯ ಅಪ್ಪಿಕೊಳ್ಳದಿರುವ ಸಮಯ,
6ಸಂಪಾದಿಸುವ ಸಮಯ, ಕಳೆದುಕೊಳ್ಳುವ ಸಮಯ, ಕಾಪಾಡುವ ಸಮಯ, ಬಿಸಾಡುವ ಸಮಯ,
7ಹರಿಯುವ ಸಮಯ, ಹೊಲಿಯುವ ಸಮಯ, ಸುಮ್ಮನಿರುವ ಸಮಯ, ಮಾತನಾಡುವ ಸಮಯ,
8ಪ್ರೀತಿಸುವ ಸಮಯ, ದ್ವೇಷಿಸುವ ಸಮಯ, ಯುದ್ಧದ ಸಮಯ, ಸಮಾಧಾನದ ಸಮಯ.
9ದುಡಿಯುವವನಿಗೆ ಅವನ ಪ್ರಯಾಸದಿಂದ ಲಾಭವೇನು?
10ಮನುಷ್ಯನಿಗೆ ಕರ್ತವ್ಯವೆಂದು ದೇವರು ನೇಮಿಸಿರುವ ಪ್ರಯಾಸವನ್ನು ನೋಡಿದ್ದೇನೆ.
11ಒಂದೊಂದು ವಸ್ತುವನ್ನು ಸಮಯಕ್ಕೆ ತಕ್ಕ ಹಾಗೆ ಅಂದವಾಗಿ ನಿರ್ಮಿಸಿದ್ದಾನೆ. ಇದಲ್ಲದೆ ಮನುಷ್ಯರ ಹೃದಯದಲ್ಲಿ ಅನಂತಕಾಲದ ಯೋಚನೆಯನ್ನು ಇಟ್ಟಿದ್ದಾನೆ. ಆದರೂ ದೇವರು ನಡೆಸುತ್ತಿರುವ ಕೆಲಸವನ್ನು ಅವರು ಗ್ರಹಿಸಲಾರದಂತೆ ಮಾಡಿದ್ದಾನೆ.
12ಮನುಷ್ಯರು ತಮ್ಮ ಜೀವಮಾನದಲ್ಲೆಲ್ಲಾ ಉಲ್ಲಾಸವಾಗಿ ಸುಖವನ್ನು ಅನುಭವಿಸುವುದಕ್ಕಿಂತ ಇನ್ನೇನೂ ಅವರಿಗೆ ಮೇಲಿಲ್ಲವೆಂದು ನಾನು ಗ್ರಹಿಸಿದ್ದೇನೆ.
13ಇದಲ್ಲದೆ ಪ್ರತಿಯೊಬ್ಬನೂ ಅನ್ನಪಾನಗಳನ್ನು ತೆಗೆದುಕೊಂಡು ತನ್ನ ನಾನಾ ಪ್ರಯಾಸಗಳಲ್ಲಿಯೂ ಸುಖವನ್ನನುಭವಿಸುವುದು ದೇವರ ಅನುಗ್ರಹವೇ ಎಂದು ನನಗೆ ಗೊತ್ತಿದೆ.
14ದೇವರ ಕಾರ್ಯವೆಲ್ಲವು ನಿತ್ಯವೆಂದು ಬಲ್ಲೆನು. ಅದಕ್ಕೆ ಯಾವುದನ್ನೂ ಸೇರಿಸಲಾರೆವು. ಅದರಿಂದ ಯಾವುದನ್ನೂ ತೆಗೆಯಲಾರೆವು. ದೇವರ ಈ ನಿಯಮಕ್ಕೆ ಮನುಷ್ಯರು ತನ್ನ ಎದುರಿನಲ್ಲಿ ಭಯಭಕ್ತಿ ಉಳ್ಳವರಾಗಿರಬೇಕೆಂಬುದೇ ಕಾರಣ.