1 ಆ ಮೇಲೆ ಪುನಃ ದೃಷ್ಟಿಸಿ ಸೂರ್ಯನ ಕೆಳಗೆ ನಡೆಯುತ್ತಿರುವ ಹಿಂಸೆಗಳನ್ನೆಲ್ಲಾ ನೋಡಿದೆನು. ಆಹಾ! ಹಿಂಸೆಗೊಂಡವರ ಕಣ್ಣೀರನ್ನು ನೋಡು. ಅವರನ್ನು ಸಂತೈಸುವವರು ಯಾರೂ ಇಲ್ಲ. ಅವರನ್ನು ಹಿಂಸಿಸುವವರಿಗೆ ಬಹಳ ಬಲ ಇದೆ. ಹಿಂಸೆಗೊಂಡವರನ್ನು ಸಂತೈಸುವವರು ಒಬ್ಬರೂ ಇಲ್ಲ.
2 ಇದನ್ನು ನೋಡಿ ಇನ್ನೂ ಜೀವದಿಂದಿದ್ದು ಬದುಕುವವರಿಗಿಂತ ಸತ್ತವರೇ ಮೇಲೆಂದು ಹೊಗಳಿದೆನು.