Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಪ್ರಸ - ಪ್ರಸ 4

ಪ್ರಸ 4:2-7

Help us?
Click on verse(s) to share them!
2ಇದನ್ನು ನೋಡಿ ಇನ್ನೂ ಜೀವದಿಂದಿದ್ದು ಬದುಕುವವರಿಗಿಂತ ಸತ್ತವರೇ ಮೇಲೆಂದು ಹೊಗಳಿದೆನು.
3ಹೌದು, ಈ ಇಬ್ಬರಿಗಿಂತಲೂ ಇನ್ನೂ ಹುಟ್ಟದೇ, ಲೋಕದಲ್ಲಿ ನಡೆಯುತ್ತಿರುವ ಅಧರ್ಮವನ್ನು ನೋಡದೆ ಇರುವುದೇ ಒಳ್ಳೆಯದೆಂದು ತಿಳಿದುಕೊಂಡೆನು.
4ಆಗ ಸಮಸ್ತ ಪ್ರಯಾಸವನ್ನು, ಕೈಗೂಡುವ ಸಕಲ ಕಾರ್ಯವನ್ನು ನೋಡಿ ಇವು ಪರಸ್ಪರ ಮತ್ಸರಕ್ಕೆ ಆಸ್ಪದವೆಂದು ಗ್ರಹಿಸಿಕೊಂಡೆನು. ಇದು ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೇ.
5ಮೂಢನು ತನ್ನ ಕೈಗಳನ್ನು ಮುಚ್ಚಿಕೊಂಡು ಯಾವ ಕೆಲಸವನ್ನು ಮಾಡದೆ, ತನ್ನನ್ನು ತಾನು ನಾಶಪಡಿಸಿಕೊಳ್ಳುವನು.
6ಗಾಳಿಯನ್ನು ಹಿಂದಟ್ಟುವ ಹಾಗೆಯೇ ಪ್ರಯಾಸದಿಂದ ತುಂಬಿದ ಎರಡು ಕೈಗಳಿಂದ ಮಾಡಿದ ಕೆಲಸಕ್ಕಿಂತ ನೆಮ್ಮದಿಯಾಗಿ ಒಂದು ಕೈಯಿಂದ ಮಾಡಿದ ಕೆಲಸವೇ ಲೇಸು.
7ಆಗ ನಾನು ಲೋಕದಲ್ಲಿ ಮತ್ತೊಂದು ವ್ಯರ್ಥ ವಿಷಯವನ್ನು ಕಂಡೆನು.

Read ಪ್ರಸ 4ಪ್ರಸ 4
Compare ಪ್ರಸ 4:2-7ಪ್ರಸ 4:2-7