Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಪ್ರಸ - ಪ್ರಸ 4

ಪ್ರಸ 4:4-11

Help us?
Click on verse(s) to share them!
4ಆಗ ಸಮಸ್ತ ಪ್ರಯಾಸವನ್ನು, ಕೈಗೂಡುವ ಸಕಲ ಕಾರ್ಯವನ್ನು ನೋಡಿ ಇವು ಪರಸ್ಪರ ಮತ್ಸರಕ್ಕೆ ಆಸ್ಪದವೆಂದು ಗ್ರಹಿಸಿಕೊಂಡೆನು. ಇದು ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೇ.
5ಮೂಢನು ತನ್ನ ಕೈಗಳನ್ನು ಮುಚ್ಚಿಕೊಂಡು ಯಾವ ಕೆಲಸವನ್ನು ಮಾಡದೆ, ತನ್ನನ್ನು ತಾನು ನಾಶಪಡಿಸಿಕೊಳ್ಳುವನು.
6ಗಾಳಿಯನ್ನು ಹಿಂದಟ್ಟುವ ಹಾಗೆಯೇ ಪ್ರಯಾಸದಿಂದ ತುಂಬಿದ ಎರಡು ಕೈಗಳಿಂದ ಮಾಡಿದ ಕೆಲಸಕ್ಕಿಂತ ನೆಮ್ಮದಿಯಾಗಿ ಒಂದು ಕೈಯಿಂದ ಮಾಡಿದ ಕೆಲಸವೇ ಲೇಸು.
7ಆಗ ನಾನು ಲೋಕದಲ್ಲಿ ಮತ್ತೊಂದು ವ್ಯರ್ಥ ವಿಷಯವನ್ನು ಕಂಡೆನು.
8ಒಬ್ಬಂಟಿಗನಾದ ಒಬ್ಬ ಮನುಷ್ಯನಿದ್ದಾನೆ. ಅವನಿಗೆ ಅಣ್ಣತಮ್ಮಂದಿರು ಇಲ್ಲ, ಮಕ್ಕಳೂ ಇಲ್ಲ. ಆದರೂ ಅವನ ಪ್ರಯಾಸಕ್ಕೆ ಅಂತ್ಯವಿಲ್ಲ, ಐಶ್ವರ್ಯದಿಂದ ಅವನ ಕಣ್ಣಿಗೆ ತೃಪ್ತಿಯಿಲ್ಲ. ಅವನು, “ನಾನು ಸುಖವನ್ನು ತೊರೆದು ಯಾರಿಗೋಸ್ಕರ ಪ್ರಯಾಸಪಡುತ್ತಾ ಇದ್ದೇನೆ?” ಅಂದುಕೊಳ್ಳುವನು. ಇದೂ ಸಹ ವ್ಯರ್ಥವೇ. ಕೇವಲ ಪ್ರಯಾಸದ ಕೆಲಸವೇ ಸರಿ.
9ಒಬ್ಬನಿಗಿಂತ ಇಬ್ಬರು ಕೆಲಸ ಮಾಡುವುದು ಒಳ್ಳೆಯದು. ಅವರ ಪ್ರಯಾಸಕ್ಕೆ ಒಳ್ಳೆಯ ಲಾಭವನ್ನು ಸಂಪಾದಿಸಬಹುದು.
10ಒಬ್ಬನು ಬಿದ್ದರೆ, ಇನ್ನೊಬ್ಬನು ತನ್ನ ಸ್ನೇಹಿತನನ್ನು ಮೇಲಕ್ಕೆ ಎಬ್ಬಿಸುವನು. ಒಬ್ಬನು ಒಬ್ಬಂಟ್ಟಿಗನಾಗಿ ಬಿದ್ದರೆ, ಅವನನ್ನು ಮೇಲಕ್ಕೆ ಎಬ್ಬಿಸುವವನು ಯಾರೂ ಇಲ್ಲ, ಅವನ ಗತಿ ದುರ್ಗತಿಯೇ.
11ಮತ್ತು ಇಬ್ಬರು ಜೊತೆಯಲ್ಲಿ ಮಲಗಿಕೊಂಡರೆ ಅವರಿಗೆ ಬೆಚ್ಚಗಾಗುತ್ತದೆ, ಆದರೆ ಒಬ್ಬನು ಹೇಗೆ ಬೆಚ್ಚಗಿರುತ್ತಾನೆ?

Read ಪ್ರಸ 4ಪ್ರಸ 4
Compare ಪ್ರಸ 4:4-11ಪ್ರಸ 4:4-11