Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಪ್ರಸ - ಪ್ರಸ 5

ಪ್ರಸ 5:11-18

Help us?
Click on verse(s) to share them!
11ಆಸ್ತಿ ಹೆಚ್ಚಾದರೆ ಅನುಭವಿಸುವವರ ಸಂಖ್ಯೆಯೂ ಹೆಚ್ಚಾಗುವುದು. ಅದನ್ನು ಕಣ್ಣಿನಿಂದ ನೋಡುವುದೇ ಹೊರತು ಯಜಮಾನನಿಗೆ ಇನ್ಯಾವ ಲಾಭವೂ ಇಲ್ಲ.
12ದುಡಿಯುವವನು ಸ್ವಲ್ಪವೇ ತಿನ್ನಲಿ ಹೆಚ್ಚೇ ತಿನ್ನಲಿ, ಹಾಯಾಗಿ ನಿದ್ರಿಸುತ್ತಾನೆ. ಆದರೆ ಐಶ್ವರ್ಯವಂತನ ಸಮೃದ್ಧಿಯು ಅವನಿಗೆ ನಿದ್ರೆ ಮಾಡಗೊಡಿಸದು.
13ಸೂರ್ಯನ ಕೆಳಗೆ ನಾನು ಮತ್ತೊಂದು ಕೇಡನ್ನು ಕಂಡೆನು. ಯಜಮಾನನು ತನ್ನ ಆಸ್ತಿಯನ್ನು ಕಾಪಾಡುವುದರಲ್ಲಿಯೇ ಕೊರಗುತ್ತಿರುವನು.
14ಆ ಆಸ್ತಿಯು ವ್ಯರ್ಥ ಪ್ರಯತ್ನದಿಂದ ಹಾಳಾಗುವುದು. ಅವನಿಗೆ ಮಗನಿದ್ದರೆ ಆ ಮಗನಿಗಾಗಿ ಅವನ ಕೈಯಲ್ಲಿ ಏನೂ ಇರದು.
15ತಾಯಿಯ ಗರ್ಭದಿಂದ ಹೇಗೆ ಬಂದನೋ ಹಾಗೆಯೇ ಏನೂ ಇಲ್ಲದವನಾಗಿ ಗತಿಸಿ ಹೋಗುವನು. ಅವನು ಪ್ರಯಾಸಪಟ್ಟರೂ, ತನ್ನ ಕೈಯಲ್ಲಿ ಏನೂ ತೆಗೆದುಕೊಂಡು ಹೋಗುವುದಿಲ್ಲ.
16ಇದು ಸಹ ದುರದೃಷ್ಟಕರವೇ. ಮನುಷ್ಯನು ಹೇಗೆ ಬಂದನೋ ಹಾಗೆಯೇ ಹೋಗುವನು. ಗಾಳಿಗಾಗಿ ಪಟ್ಟ ಪ್ರಯಾಸದಿಂದ ಅವನಿಗೆ ಲಾಭವೇನು?
17ಅವನು ತನ್ನ ಜೀವಮಾನವೆಲ್ಲಾ ಕತ್ತಲೆಯಲ್ಲಿ ಜೀವಿಸುವನು. ಅವನ ರೋಗದೊಂದಿಗೆ ಅವನಿಗೆ ಬಹಳ ರೋಷವೂ ವ್ಯಥೆಯೂ ಇರುವುದು.
18ಇಗೋ, ನಾನು ಕಂಡದ್ದು ಇದೇ. ದೇವರು ಒಬ್ಬನಿಗೆ ದಯಪಾಲಿಸಿರುವ ಜೀವಮಾನದ ದಿನಗಳಲ್ಲೆಲ್ಲಾ ಅವನು ಅನ್ನಪಾನಗಳನ್ನು ತೆಗೆದುಕೊಂಡು ತಾನು ಲೋಕದೊಳಗೆ ಪಡುವ ಪ್ರಯಾಸದಲ್ಲಿಯೂ ಸುಖವನ್ನು ಅನುಭವಿಸುವನು. ಇದು ಅವನಿಗೆ ಉಚಿತವಾದದ್ದೂ, ಉತ್ತಮವಾದದ್ದೂ ಆಗಿದೆ. ಇದೇ ಅವನ ಪಾಲು.

Read ಪ್ರಸ 5ಪ್ರಸ 5
Compare ಪ್ರಸ 5:11-18ಪ್ರಸ 5:11-18