Text copied!
Bibles in Kannada

ಪ್ರಸ 5:14-19 in Kannada

Help us?

ಪ್ರಸ 5:14-19 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆ ಆಸ್ತಿಯು ವ್ಯರ್ಥ ಪ್ರಯತ್ನದಿಂದ ಹಾಳಾಗುವುದು. ಅವನಿಗೆ ಮಗನಿದ್ದರೆ ಆ ಮಗನಿಗಾಗಿ ಅವನ ಕೈಯಲ್ಲಿ ಏನೂ ಇರದು.
15 ತಾಯಿಯ ಗರ್ಭದಿಂದ ಹೇಗೆ ಬಂದನೋ ಹಾಗೆಯೇ ಏನೂ ಇಲ್ಲದವನಾಗಿ ಗತಿಸಿ ಹೋಗುವನು. ಅವನು ಪ್ರಯಾಸಪಟ್ಟರೂ, ತನ್ನ ಕೈಯಲ್ಲಿ ಏನೂ ತೆಗೆದುಕೊಂಡು ಹೋಗುವುದಿಲ್ಲ.
16 ಇದು ಸಹ ದುರದೃಷ್ಟಕರವೇ. ಮನುಷ್ಯನು ಹೇಗೆ ಬಂದನೋ ಹಾಗೆಯೇ ಹೋಗುವನು. ಗಾಳಿಗಾಗಿ ಪಟ್ಟ ಪ್ರಯಾಸದಿಂದ ಅವನಿಗೆ ಲಾಭವೇನು?
17 ಅವನು ತನ್ನ ಜೀವಮಾನವೆಲ್ಲಾ ಕತ್ತಲೆಯಲ್ಲಿ ಜೀವಿಸುವನು. ಅವನ ರೋಗದೊಂದಿಗೆ ಅವನಿಗೆ ಬಹಳ ರೋಷವೂ ವ್ಯಥೆಯೂ ಇರುವುದು.
18 ಇಗೋ, ನಾನು ಕಂಡದ್ದು ಇದೇ. ದೇವರು ಒಬ್ಬನಿಗೆ ದಯಪಾಲಿಸಿರುವ ಜೀವಮಾನದ ದಿನಗಳಲ್ಲೆಲ್ಲಾ ಅವನು ಅನ್ನಪಾನಗಳನ್ನು ತೆಗೆದುಕೊಂಡು ತಾನು ಲೋಕದೊಳಗೆ ಪಡುವ ಪ್ರಯಾಸದಲ್ಲಿಯೂ ಸುಖವನ್ನು ಅನುಭವಿಸುವನು. ಇದು ಅವನಿಗೆ ಉಚಿತವಾದದ್ದೂ, ಉತ್ತಮವಾದದ್ದೂ ಆಗಿದೆ. ಇದೇ ಅವನ ಪಾಲು.
19 ಪ್ರತಿಯೊಬ್ಬ ಮನುಷ್ಯನಿಗೆ ದೇವರು ಆಸ್ತಿಪಾಸ್ತಿಗಳನ್ನು ದಯಪಾಲಿಸಿ, ಅದನ್ನು ಅನುಭವಿಸಿ, ಪಾಲಿಗೆ ಬಂದದ್ದನ್ನು ಪಡೆದು ತನ್ನ ಪ್ರಯಾಸದಲ್ಲಿ ಸಂತೋಷಪಡಲು ಶಕ್ತಿಕೊಟ್ಟಿದ್ದರೆ ಅದು ಅವನಿಗೆ ದೊರೆತ ದೇವರ ಅನುಗ್ರಹವೇ.
ಪ್ರಸ 5 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019