Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಪ್ರಸ - ಪ್ರಸ 6

ಪ್ರಸ 6:2-7

Help us?
Click on verse(s) to share them!
2ಅದೇನೆಂದರೆ ದೇವರು ಒಬ್ಬನಿಗೆ ಯಾವ ಇಷ್ಟಾರ್ಥಕ್ಕೂ ಕೊರತೆಯಿಲ್ಲದಂತೆ ಧನವನ್ನು, ಸಂಪತ್ತನ್ನು ಹಾಗು ಘನತೆಯನ್ನು ಅನುಗ್ರಹಿಸುವನು. ಆದರೆ ಅದನ್ನು ಅನುಭವಿಸುವುದಕ್ಕೆ ದೇವರು ಅವನನ್ನು ಶಕ್ತಿಗೊಳಿಸುವುದಿಲ್ಲ. ಅದನ್ನು ಮತ್ತೊಬ್ಬನು ಅನುಭವಿಸುವನು. ಇದು ಸಹ ವ್ಯರ್ಥವೂ, ದುಃಖಕರವಾದ ಕೆಟ್ಟತನವೂ ಆಗಿದೆ.
3ನೂರಾರು ಮಕ್ಕಳನ್ನು ಪಡೆದು ಮುಪ್ಪಿನ ಮುದುಕನಾಗುವ ತನಕ ಬಹಳ ವರ್ಷ ಬದುಕಿದವನಿಗೆ ಸಂತೃಪ್ತಿಯೂ, ಉತ್ತರಕ್ರಿಯೆಯೂ ಇಲ್ಲದಿದ್ದರೆ, ಇವನಿಗಿಂತಲೂ ಗರ್ಭಸ್ರಾವದ ಪಿಂಡವೇ ಉತ್ತಮ ಅಂದುಕೊಂಡೆನು.
4ಅದು ವ್ಯರ್ಥವಾಗಿ ಬರುತ್ತದೆ. ಕತ್ತಲಲ್ಲಿ ಮರೆಯಾಗುತ್ತದೆ. ಅಂಧಕಾರವು ಅದರ ಹೆಸರನ್ನು ಕವಿದಿರುತ್ತದೆ.
5ಅದು ಸೂರ್ಯನನ್ನು ಕಂಡಿಲ್ಲ. ಅದಕ್ಕೆ ತಿಳಿವಳಿಕೆಯೇ ಇಲ್ಲ. ಆದರೂ ಅವನಿಗಿಂತ ಅದರ ಶಾಂತಿಯೇ ಹೆಚ್ಚು.
6ಎರಡು ಸಾವಿರ ವರ್ಷ ಅವನು ಬದುಕಿದರೂ ಅವನು ತನ್ನ ಐಶ್ವರ್ಯವನ್ನು ಅನುಭವಿಸಲಿಲ್ಲ. ಎಲ್ಲರೂ ಒಂದೇ ಸ್ಥಳಕ್ಕೆ ಹೋಗುತ್ತಾರೆ.
7ಮನುಷ್ಯನು ಪಡುವ ಪ್ರಯಾಸವೆಲ್ಲಾ ತನ್ನ ಹೊಟ್ಟೆಗಾಗಿಯೇ, ಆದರೂ ಅವನಿಗೆ ತೃಪ್ತಿಯಿಲ್ಲ.

Read ಪ್ರಸ 6ಪ್ರಸ 6
Compare ಪ್ರಸ 6:2-7ಪ್ರಸ 6:2-7