Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಪ್ರಸ - ಪ್ರಸ 6

ಪ್ರಸ 6:5-12

Help us?
Click on verse(s) to share them!
5ಅದು ಸೂರ್ಯನನ್ನು ಕಂಡಿಲ್ಲ. ಅದಕ್ಕೆ ತಿಳಿವಳಿಕೆಯೇ ಇಲ್ಲ. ಆದರೂ ಅವನಿಗಿಂತ ಅದರ ಶಾಂತಿಯೇ ಹೆಚ್ಚು.
6ಎರಡು ಸಾವಿರ ವರ್ಷ ಅವನು ಬದುಕಿದರೂ ಅವನು ತನ್ನ ಐಶ್ವರ್ಯವನ್ನು ಅನುಭವಿಸಲಿಲ್ಲ. ಎಲ್ಲರೂ ಒಂದೇ ಸ್ಥಳಕ್ಕೆ ಹೋಗುತ್ತಾರೆ.
7ಮನುಷ್ಯನು ಪಡುವ ಪ್ರಯಾಸವೆಲ್ಲಾ ತನ್ನ ಹೊಟ್ಟೆಗಾಗಿಯೇ, ಆದರೂ ಅವನಿಗೆ ತೃಪ್ತಿಯಿಲ್ಲ.
8ಬುದ್ಧಿಹೀನನಿಗಿಂತ ಜ್ಞಾನಿಗೆ ಹೆಚ್ಚು ಲಾಭ ಏನಿದೆ? ಜನರ ಮುಂದೆ ಸರಿಯಾಗಿ ನಡೆದುಕೊಳ್ಳಲು ತಿಳಿಯದೇ ಇರುವ ಬಡವನಿಗೆ ಲಾಭವೇನು?
9ಬಗೆಬಗೆಯಾಗಿ ಆಶಿಸುವುದಕ್ಕಿಂತ ಕಣ್ಣೆದುರಿಗಿರುವುದನ್ನು ಅನುಭವಿಸುವುದೇ ಒಳ್ಳೇಯದು. ಇದು ಕೂಡ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೇ.
10ಮನುಷ್ಯನು ಎಂಥವನಾದರೂ ಪೂರ್ವದಲ್ಲಿ ಅವನಿಗೆ ವಿಧಿಸಲ್ಪಟ್ಟ ಹೆಸರಿನಿಂದ ಅವನು ಮಣ್ಣಿನವನೇ ಎಂದು ಗೊತ್ತಾಗಿದೆ. ತನಗಿಂತ ಬಲಿಷ್ಠನ ಸಂಗಡ ಹೋರಾಡಲಾರನು.
11ಮಾತು ಹೆಚ್ಚಿದಷ್ಟು ಪರಿಣಾಮ ಕಡಿಮೆ, ಅವುಗಳಿಂದ ಮನುಷ್ಯನಿಗೆ ಏನು ಪ್ರಯೋಜನ?
12ನೆರಳಿನಂತೆ ವ್ಯರ್ಥವಾಗಿ ಕಳೆದುಹೋಗುವ ಮನುಷ್ಯನ ಜೀವಮಾನದ ದಿನಗಳಲ್ಲೆಲ್ಲಾ ಅವನಿಗೆ ಯಾವುದು ಮೇಲೆಂದು ಯಾರಿಗೆ ಗೊತ್ತು? ತಾನು ಸತ್ತುಹೋದ ಮೇಲೆ ಇಹಲೋಕದಲ್ಲಿ ಏನಾಗುವುದೆಂದು ಅವನು ಯಾರಿಂದ ತಿಳಿದುಕೊಂಡಾನು?

Read ಪ್ರಸ 6ಪ್ರಸ 6
Compare ಪ್ರಸ 6:5-12ಪ್ರಸ 6:5-12