10ಹಿಂದಿನ ಕಾಲವು ಈ ಕಾಲಕ್ಕಿಂತ ಮೇಲಾದದ್ದಕ್ಕೆ ಕಾರಣವೇನು ಅನ್ನಬೇಡ. ನೀನು ಈ ವಿಷಯದಲ್ಲಿ ವಿಚಾರಿಸುವುದು ಜ್ಞಾನಕಾರ್ಯವಲ್ಲ.
11ಜ್ಞಾನವು ಸ್ವತ್ತಿನಂತೆ ಪ್ರಯೋಜನಕರ. ಇದು ಲೋಕದಲ್ಲಿ ಜೀವಿಸುವವರಿಗೆ ಸ್ವತ್ತಿಗಿಂತ ಉತ್ತಮೋತ್ತಮವಾಗಿದೆ.
12ಧನವು ಹೇಗೊ ಹಾಗೆ ಜ್ಞಾನವು ಆಶ್ರಯ. ಜ್ಞಾನಕ್ಕೆ ವಿಶೇಷವೇನೆಂದರೆ ತನ್ನನ್ನು ಹೊಂದಿದವನಿಗೆ ಅದು ಜೀವದಾಯಕವೆಂಬುದೇ.
13ದೇವರ ಕಾರ್ಯವನ್ನು ನೋಡು; ಆತನು ಸೊಟ್ಟಗೆ ಮಾಡಿದ್ದನ್ನು ನೆಟ್ಟಗೆ ಮಾಡುವುದಕ್ಕೆ ಯಾರಿಂದಾದೀತು?