13ದೇವರ ಕಾರ್ಯವನ್ನು ನೋಡು; ಆತನು ಸೊಟ್ಟಗೆ ಮಾಡಿದ್ದನ್ನು ನೆಟ್ಟಗೆ ಮಾಡುವುದಕ್ಕೆ ಯಾರಿಂದಾದೀತು?
14ಸುಖದ ದಿನದಲ್ಲಿ ಸುಖದಿಂದಿರು, ದುಃಖದ ದಿನದಲ್ಲಿ ಯೋಚಿಸು; ಮನುಷ್ಯನು ತನ್ನ ಕಾಲವಾದ ಮೇಲೆ ಸಂಭವಿಸುವ ಯಾವುದನ್ನೂ ಗ್ರಹಿಸಲಾರದಂತೆ, ದೇವರು ಇವುಗಳನ್ನು ಒಂದರ ಮೇಲೊಂದು ಬರಮಾಡಿದ್ದಾನೆ.
15ನೀತಿವಂತನು ತನ್ನ ನೀತಿಯಲ್ಲಿಯೇ ನಶಿಸುವುದುಂಟು. ದುಷ್ಟನು ತನ್ನ ದುಷ್ಟತನದಲ್ಲಿಯೇ ಬಹಳ ದಿನ ಬದುಕುವುದುಂಟು. ಇದನ್ನೆಲ್ಲಾ ನನ್ನ ವ್ಯರ್ಥವಾದ ಜೀವಮಾನದಲ್ಲಿ ನೋಡಿದ್ದೇನೆ.
16ನೀನು ಅತಿಯಾಗಿ ನೀತಿವಂತನಾಗಿರಬೇಡ, ನಿನ್ನ ದೃಷ್ಟಿಯಲ್ಲಿ ನೀನು ಜ್ಞಾನಿಯಾಗಿರಬೇಡ. ನಿನ್ನನ್ನು ನೀನೇ ನಾಶನಕ್ಕೆ ಏಕೆ ಗುರಿಮಾಡಿಕೊಳ್ಳುವಿ?