Text copied!
Bibles in Kannada

ಪ್ರಸ 7:2-12 in Kannada

Help us?

ಪ್ರಸ 7:2-12 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಔತಣದ ಮನೆಗಿಂತ ಮರಣದುಃಖದ ಮನೆಗೆ ಹೋಗುವುದು ಲೇಸು. ಎಲ್ಲಾ ಮನುಷ್ಯರಿಗೂ ಕೊನೆಗೆ ಇದೇ ಗತಿ, ಜೀವಂತನು ಇದನ್ನು ನೋಡಿ ತನ್ನ ಹೃದಯದಲ್ಲಿ ಸ್ಮರಿಸುವನು.
3 ನಗೆಗಿಂತ ದುಃಖವು ವಾಸಿ, ಮುಖವು ಸಪ್ಪಗಿರುವಲ್ಲಿ ಹೃದಯಕ್ಕೆ ಮೇಲು.
4 ದುಃಖದ ಮನೆಯು ಜ್ಞಾನಿಗಳ ಮನಸ್ಸಿಗೆ ನೆಲೆ, ಉಲ್ಲಾಸದ ಮನೆಯು ಮೂಢರ ಮನಸ್ಸಿಗೆ ನಿವಾಸ.
5 ಮೂಢರ ಗಾನಕ್ಕಿಂತ ಜ್ಞಾನಿಗಳ ಗದರಿಕೆಯನ್ನು ಕೇಳುವುದು ಲೇಸು.
6 ಮೂಢರ ನಗುವು ಮಡಿಕೆಯ ಕೆಳಗೆ ಉರಿಯುವ ಮುಳ್ಳಿನ ಚಟಪಟ ಶಬ್ದದ ಹಾಗೆಯೇ. ಇದೂ ಕೂಡ ವ್ಯರ್ಥ.
7 ದಬ್ಬಾಳಿಕೆಯು ಜ್ಞಾನಿಯನ್ನು ಮೂರ್ಖನನ್ನಾಗಿಸುತ್ತದೆ, ಲಂಚವು ಹೃದಯವನ್ನು ಕೆಡಿಸುತ್ತದೆ.
8 ಆದಿಗಿಂತ ಅಂತ್ಯವು ಲೇಸು; ಅಹಂಕಾರಿಗಿಂತ ತಾಳ್ಮೆಯುಳ್ಳವನು ಉತ್ತಮ.
9 ನಿನ್ನ ಮನಸ್ಸು ಕೋಪಕ್ಕೆ ಆತುರಪಡದಿರಲಿ, ಕೋಪಕ್ಕೆ ಮೂಢರ ಎದೆಯೇ ಲೇಸು.
10 ಹಿಂದಿನ ಕಾಲವು ಈ ಕಾಲಕ್ಕಿಂತ ಮೇಲಾದದ್ದಕ್ಕೆ ಕಾರಣವೇನು ಅನ್ನಬೇಡ. ನೀನು ಈ ವಿಷಯದಲ್ಲಿ ವಿಚಾರಿಸುವುದು ಜ್ಞಾನಕಾರ್ಯವಲ್ಲ.
11 ಜ್ಞಾನವು ಸ್ವತ್ತಿನಂತೆ ಪ್ರಯೋಜನಕರ. ಇದು ಲೋಕದಲ್ಲಿ ಜೀವಿಸುವವರಿಗೆ ಸ್ವತ್ತಿಗಿಂತ ಉತ್ತಮೋತ್ತಮವಾಗಿದೆ.
12 ಧನವು ಹೇಗೊ ಹಾಗೆ ಜ್ಞಾನವು ಆಶ್ರಯ. ಜ್ಞಾನಕ್ಕೆ ವಿಶೇಷವೇನೆಂದರೆ ತನ್ನನ್ನು ಹೊಂದಿದವನಿಗೆ ಅದು ಜೀವದಾಯಕವೆಂಬುದೇ.
ಪ್ರಸ 7 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019