2ಔತಣದ ಮನೆಗಿಂತ ಮರಣದುಃಖದ ಮನೆಗೆ ಹೋಗುವುದು ಲೇಸು. ಎಲ್ಲಾ ಮನುಷ್ಯರಿಗೂ ಕೊನೆಗೆ ಇದೇ ಗತಿ, ಜೀವಂತನು ಇದನ್ನು ನೋಡಿ ತನ್ನ ಹೃದಯದಲ್ಲಿ ಸ್ಮರಿಸುವನು.
3ನಗೆಗಿಂತ ದುಃಖವು ವಾಸಿ, ಮುಖವು ಸಪ್ಪಗಿರುವಲ್ಲಿ ಹೃದಯಕ್ಕೆ ಮೇಲು.
4ದುಃಖದ ಮನೆಯು ಜ್ಞಾನಿಗಳ ಮನಸ್ಸಿಗೆ ನೆಲೆ, ಉಲ್ಲಾಸದ ಮನೆಯು ಮೂಢರ ಮನಸ್ಸಿಗೆ ನಿವಾಸ.
5ಮೂಢರ ಗಾನಕ್ಕಿಂತ ಜ್ಞಾನಿಗಳ ಗದರಿಕೆಯನ್ನು ಕೇಳುವುದು ಲೇಸು.
6ಮೂಢರ ನಗುವು ಮಡಿಕೆಯ ಕೆಳಗೆ ಉರಿಯುವ ಮುಳ್ಳಿನ ಚಟಪಟ ಶಬ್ದದ ಹಾಗೆಯೇ. ಇದೂ ಕೂಡ ವ್ಯರ್ಥ.
7ದಬ್ಬಾಳಿಕೆಯು ಜ್ಞಾನಿಯನ್ನು ಮೂರ್ಖನನ್ನಾಗಿಸುತ್ತದೆ, ಲಂಚವು ಹೃದಯವನ್ನು ಕೆಡಿಸುತ್ತದೆ.
8ಆದಿಗಿಂತ ಅಂತ್ಯವು ಲೇಸು; ಅಹಂಕಾರಿಗಿಂತ ತಾಳ್ಮೆಯುಳ್ಳವನು ಉತ್ತಮ.
9ನಿನ್ನ ಮನಸ್ಸು ಕೋಪಕ್ಕೆ ಆತುರಪಡದಿರಲಿ, ಕೋಪಕ್ಕೆ ಮೂಢರ ಎದೆಯೇ ಲೇಸು.
10ಹಿಂದಿನ ಕಾಲವು ಈ ಕಾಲಕ್ಕಿಂತ ಮೇಲಾದದ್ದಕ್ಕೆ ಕಾರಣವೇನು ಅನ್ನಬೇಡ. ನೀನು ಈ ವಿಷಯದಲ್ಲಿ ವಿಚಾರಿಸುವುದು ಜ್ಞಾನಕಾರ್ಯವಲ್ಲ.
11ಜ್ಞಾನವು ಸ್ವತ್ತಿನಂತೆ ಪ್ರಯೋಜನಕರ. ಇದು ಲೋಕದಲ್ಲಿ ಜೀವಿಸುವವರಿಗೆ ಸ್ವತ್ತಿಗಿಂತ ಉತ್ತಮೋತ್ತಮವಾಗಿದೆ.
12ಧನವು ಹೇಗೊ ಹಾಗೆ ಜ್ಞಾನವು ಆಶ್ರಯ. ಜ್ಞಾನಕ್ಕೆ ವಿಶೇಷವೇನೆಂದರೆ ತನ್ನನ್ನು ಹೊಂದಿದವನಿಗೆ ಅದು ಜೀವದಾಯಕವೆಂಬುದೇ.
13ದೇವರ ಕಾರ್ಯವನ್ನು ನೋಡು; ಆತನು ಸೊಟ್ಟಗೆ ಮಾಡಿದ್ದನ್ನು ನೆಟ್ಟಗೆ ಮಾಡುವುದಕ್ಕೆ ಯಾರಿಂದಾದೀತು?
14ಸುಖದ ದಿನದಲ್ಲಿ ಸುಖದಿಂದಿರು, ದುಃಖದ ದಿನದಲ್ಲಿ ಯೋಚಿಸು; ಮನುಷ್ಯನು ತನ್ನ ಕಾಲವಾದ ಮೇಲೆ ಸಂಭವಿಸುವ ಯಾವುದನ್ನೂ ಗ್ರಹಿಸಲಾರದಂತೆ, ದೇವರು ಇವುಗಳನ್ನು ಒಂದರ ಮೇಲೊಂದು ಬರಮಾಡಿದ್ದಾನೆ.
15ನೀತಿವಂತನು ತನ್ನ ನೀತಿಯಲ್ಲಿಯೇ ನಶಿಸುವುದುಂಟು. ದುಷ್ಟನು ತನ್ನ ದುಷ್ಟತನದಲ್ಲಿಯೇ ಬಹಳ ದಿನ ಬದುಕುವುದುಂಟು. ಇದನ್ನೆಲ್ಲಾ ನನ್ನ ವ್ಯರ್ಥವಾದ ಜೀವಮಾನದಲ್ಲಿ ನೋಡಿದ್ದೇನೆ.
16ನೀನು ಅತಿಯಾಗಿ ನೀತಿವಂತನಾಗಿರಬೇಡ, ನಿನ್ನ ದೃಷ್ಟಿಯಲ್ಲಿ ನೀನು ಜ್ಞಾನಿಯಾಗಿರಬೇಡ. ನಿನ್ನನ್ನು ನೀನೇ ನಾಶನಕ್ಕೆ ಏಕೆ ಗುರಿಮಾಡಿಕೊಳ್ಳುವಿ?