Text copied!
Bibles in Kannada

ಪ್ರಸ 7:24-29 in Kannada

Help us?

ಪ್ರಸ 7:24-29 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಜ್ಞಾನವು ಬಹಳ ದೂರದಲ್ಲಿಯೂ, ಅಗಾಧದಲ್ಲಿಯೂ ಇದೆ. ಅದನ್ನು ಯಾರು ಕಂಡುಕೊಂಡಾರು?
25 ನಾನು ತಿರುಗಿಕೊಂಡು, ಜ್ಞಾನವನ್ನು ಮತ್ತು ಮೂಲತತ್ವವನ್ನು ಹುಡುಕಿ, ವಿಚಾರಿಸಿ ಗ್ರಹಿಸುವುದಕ್ಕೂ ಅಧರ್ಮವು ಮೂರ್ಖತನ, ಅಜ್ಞಾನವು ಹುಚ್ಚುತನ ಎಂದು ತಿಳಿದುಕೊಳ್ಳುವುದಕ್ಕೂ ಮನಸ್ಸಿಟ್ಟೆನು.
26 ಆಗ ಮರಣಕ್ಕಿಂತ ಹೆಚ್ಚು ವಿಷವೊಂದು ಕಂಡುಬಂತು. ಯಾವುದೆಂದರೆ ಕೆಟ್ಟ ಹೆಂಗಸೇ. ಅವಳ ಹೃದಯವು ಉರುಲುಗಳೂ, ಬಲೆಗಳೂ, ಅವಳ ತೋಳುಗಳು ಸಂಕೋಲೆಗಳು. ದೇವರು ಒಲಿದವನು ಅವಳಿಂದ ತಪ್ಪಿಸಿಕೊಳ್ಳುವನು. ಆದರೆ ಪಾಪಿಯು ಅವಳ ಕೈಗೆ ಸಿಕ್ಕಿಬೀಳುವನು.
27 ಪ್ರಸಂಗಿಯು ಹೀಗೆ ಹೇಳುತ್ತಾನೆ, “ನೋಡು, ನಾನು ಇದನ್ನು ಹುಡುಕಿ ಕಂಡುಕೊಂಡಿದ್ದೇನೆ” ಮತ್ತೊಂದು ಸಂಶೋಧನೆಯನ್ನು ಎಷ್ಟು ನಡೆಸಿದರೂ ಉತ್ತರ ಸಿಕ್ಕಲಿಲ್ಲ.
28 ಸಹಸ್ರ ಪುರುಷರಲ್ಲಿ ಯೋಗ್ಯನೊಬ್ಬನನ್ನು ಕಂಡಿದ್ದರೂ ಕಂಡಿರಬಹುದು, ಆದರೆ ಸಹಸ್ರ ಸ್ತ್ರೀಯರಲ್ಲಿ ಯೋಗ್ಯಳೊಬ್ಬಳನ್ನೂ ಕಂಡಿಲ್ಲ.
29 ದೇವರು ಮನುಷ್ಯರನ್ನು ಸತ್ಯವಂತನನ್ನಾಗಿ ಸೃಷ್ಟಿಸಿದನು. ಅವರಾದರೋ ಬಹು ಯುಕ್ತಿಗಳನ್ನು ಕಲ್ಪಿಸಿಕೊಂಡಿದ್ದಾರೆ. ಇದನ್ನು ಮಾತ್ರ ನಾನು ಕಂಡುಕೊಂಡಿದ್ದೇನೆ.
ಪ್ರಸ 7 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019