Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಪ್ರಸ - ಪ್ರಸ 8

ಪ್ರಸ 8:2-8

Help us?
Click on verse(s) to share them!
2ದೇವರ ಮೇಲೆ ಇಟ್ಟ ಆಣೆಯ ನಿಮಿತ್ತ ರಾಜನ ಆಜ್ಞೆಯನ್ನು ಕೈಕೊಳ್ಳಬೇಕೆಂಬುದು ನನ್ನ ಬೋಧನೆ.
3ಅರಸನ ಸನ್ನಿಧಿಯಿಂದ ತೊಲಗಿಬಿಡಲು ಆತುರಪಡಬೇಡ. ದ್ರೋಹಕ್ಕೆ ಸೇರದಿರು. ಅವನು ಇಷ್ಟಬಂದಂತೆ ಮಾಡಬಲ್ಲನು.
4ಅರಸನ ಮಾತಿಗೆ ಅಧಿಕಾರವುಂಟು “ನೀನು ಏನು ಮಾಡುತ್ತಿರುವೆ?” ಎಂದು ಅವನನ್ನು ಯಾರು ತಾನೇ ಕೇಳಬಹುದು.
5ಅರಸನ ಆಜ್ಞೆಗಳನ್ನು ಕೈಕೊಳ್ಳುವವನು ಕೇಡನ್ನು ಅನುಭವಿಸುವುದಿಲ್ಲ. ಜ್ಞಾನಿಯ ಹೃದಯವು ಕಾಲ ಮತ್ತು ನ್ಯಾಯ ಎರಡನ್ನು ತಿಳಿದುಕೊಳ್ಳುತ್ತದೆ.
6ಪ್ರತಿಯೊಂದು ಕಾರ್ಯಕ್ಕೂ ಒಂದು ಕಾಲ ಮತ್ತು ಒಂದು ಕ್ರಮ ಇರುತ್ತದೆಯಲ್ಲವೇ, ಮನುಷ್ಯನು ಪಡುವ ಕಷ್ಟವು ಅವನಿಗೆ ಘೋರವಾಗಿದೆ.
7ಮುಂದೆ ಏನಾಗುವುದು ಯಾರಿಗೂ ಗೊತ್ತಿಲ್ಲ. ಮುಂದೆ ಆಗುವುದನ್ನು ಅವನಿಗೆ ವಿವರಿಸಬಲ್ಲವರು ಯಾರು?
8ಗಾಳಿಯನ್ನು ತಡೆಯುವ ಶಕ್ತಿಯು ಹೇಗೆ ಯಾರಿಗೂ ಇಲ್ಲವೋ, ಹಾಗೆಯೇ ತಮ್ಮ ಮರಣ ದಿನವನ್ನು ತಡೆಯುವ ಶಕ್ತಿಯು ಯಾರಿಗೂ ಇಲ್ಲ. ಯುದ್ಧ ಕಾಲದಲ್ಲಿ ಹೇಗೆ ವಿರಾಮ ದೊರೆಯುವುದಿಲ್ಲವೋ, ಹಾಗೆಯೇ ದುಷ್ಟನಿಗೆ ದುಷ್ಟತನದಿಂದ ಬಿಡುಗಡೆಯೇ ಇಲ್ಲ.

Read ಪ್ರಸ 8ಪ್ರಸ 8
Compare ಪ್ರಸ 8:2-8ಪ್ರಸ 8:2-8