Text copied!
Bibles in Kannada

ಪ್ರಸ 8:2-8 in Kannada

Help us?

ಪ್ರಸ 8:2-8 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ದೇವರ ಮೇಲೆ ಇಟ್ಟ ಆಣೆಯ ನಿಮಿತ್ತ ರಾಜನ ಆಜ್ಞೆಯನ್ನು ಕೈಕೊಳ್ಳಬೇಕೆಂಬುದು ನನ್ನ ಬೋಧನೆ.
3 ಅರಸನ ಸನ್ನಿಧಿಯಿಂದ ತೊಲಗಿಬಿಡಲು ಆತುರಪಡಬೇಡ. ದ್ರೋಹಕ್ಕೆ ಸೇರದಿರು. ಅವನು ಇಷ್ಟಬಂದಂತೆ ಮಾಡಬಲ್ಲನು.
4 ಅರಸನ ಮಾತಿಗೆ ಅಧಿಕಾರವುಂಟು “ನೀನು ಏನು ಮಾಡುತ್ತಿರುವೆ?” ಎಂದು ಅವನನ್ನು ಯಾರು ತಾನೇ ಕೇಳಬಹುದು.
5 ಅರಸನ ಆಜ್ಞೆಗಳನ್ನು ಕೈಕೊಳ್ಳುವವನು ಕೇಡನ್ನು ಅನುಭವಿಸುವುದಿಲ್ಲ. ಜ್ಞಾನಿಯ ಹೃದಯವು ಕಾಲ ಮತ್ತು ನ್ಯಾಯ ಎರಡನ್ನು ತಿಳಿದುಕೊಳ್ಳುತ್ತದೆ.
6 ಪ್ರತಿಯೊಂದು ಕಾರ್ಯಕ್ಕೂ ಒಂದು ಕಾಲ ಮತ್ತು ಒಂದು ಕ್ರಮ ಇರುತ್ತದೆಯಲ್ಲವೇ, ಮನುಷ್ಯನು ಪಡುವ ಕಷ್ಟವು ಅವನಿಗೆ ಘೋರವಾಗಿದೆ.
7 ಮುಂದೆ ಏನಾಗುವುದು ಯಾರಿಗೂ ಗೊತ್ತಿಲ್ಲ. ಮುಂದೆ ಆಗುವುದನ್ನು ಅವನಿಗೆ ವಿವರಿಸಬಲ್ಲವರು ಯಾರು?
8 ಗಾಳಿಯನ್ನು ತಡೆಯುವ ಶಕ್ತಿಯು ಹೇಗೆ ಯಾರಿಗೂ ಇಲ್ಲವೋ, ಹಾಗೆಯೇ ತಮ್ಮ ಮರಣ ದಿನವನ್ನು ತಡೆಯುವ ಶಕ್ತಿಯು ಯಾರಿಗೂ ಇಲ್ಲ. ಯುದ್ಧ ಕಾಲದಲ್ಲಿ ಹೇಗೆ ವಿರಾಮ ದೊರೆಯುವುದಿಲ್ಲವೋ, ಹಾಗೆಯೇ ದುಷ್ಟನಿಗೆ ದುಷ್ಟತನದಿಂದ ಬಿಡುಗಡೆಯೇ ಇಲ್ಲ.
ಪ್ರಸ 8 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019