9ನಾನು ಇದನ್ನೆಲ್ಲಾ ನೋಡಿ, ಈ ಲೋಕದೊಳಗೆ ನಡೆಯುವ ಸಕಲ ಕಾರ್ಯಗಳನ್ನೂ ಪರಿಶೀಲಿಸಿದ್ದೇನೆ. ಒಬ್ಬ ಮನುಷ್ಯನು ಇನ್ನೊಬ್ಬನ ಮೇಲೆ ಅಧಿಕಾರ ನಡೆಸಿ ಅವನಿಗೆ ಹಾನಿಯನ್ನು ಉಂಟುಮಾಡುವ ಕಾಲವೂ ಇದೆ.
10ಇದಲ್ಲದೆ ದುಷ್ಟರಿಗೆ ಸಮಾಧಿಯಾಗುವುದನ್ನು ಕಂಡೆನು. ಅವರು ಸುಖವಾಗಿ ಗತಿಸುವರು. ಧಾರ್ಮಿಕರೋ ಪರಿಶುದ್ಧ ಸ್ಥಾನದಿಂದ ತೊಲಗಬೇಕಾಯಿತು. ಪಟ್ಟಣದಲ್ಲಿ ಅವರ ಜ್ಞಾಪಕವೇ ಇಲ್ಲವಾಯಿತು. ಇದೂ ವ್ಯರ್ಥವೇ.
11ಅಪರಾಧಕ್ಕೆ ವಿಧಿಸಿದ ದಂಡನೆಯು ಕೂಡಲೇ ನಡೆಯದಿರುವ ಕಾರಣ ಅಪರಾಧ ಮಾಡಬೇಕೆಂಬ ಯೋಚನೆಯು ಮನುಷ್ಯರ ಹೃದಯದಲ್ಲಿ ತುಂಬಿ ತುಳುಕುವುದು.
12ಪಾಪಿಯು ನೂರು ಸಲ ಅಧರ್ಮ ಮಾಡಿ ಬಹು ಕಾಲ ಬದುಕಿದರೂ, ದೇವರ ಮುಂದೆ ಹೆದರಿ, ಆತನಲ್ಲಿ ಭಯಭಕ್ತಿಯುಳ್ಳವರಿಗೆ ಒಳ್ಳೆಯದೇ ಆಗುವುದೆಂದು ಬಲ್ಲೆನು.
13ಆದರೆ ದುಷ್ಟನಿಗೆ ಒಳ್ಳೆಯದಾಗುವುದಿಲ್ಲ. ನೆರಳಿನಂತಿರುವ ಅವನ ದಿನಗಳು ಹೆಚ್ಚುವುದಿಲ್ಲ. ಏಕೆಂದರೆ ಅವನು ದೇವರಿಗೆ ಭಯಪಡುವುದಿಲ್ಲ.