15ಆಗ ಅಲ್ಲಿದ್ದವರು ತಮ್ಮಲ್ಲಿ ಒಬ್ಬ ಬಡ ಜ್ಞಾನಿಯನ್ನು ಕಂಡುಕೊಂಡರು. ಅವನು ತನ್ನ ಜ್ಞಾನದಿಂದಲೇ ಆ ಪಟ್ಟಣವನ್ನು ರಕ್ಷಿಸಿದನು. ಆದರೆ ಆ ಬಡ ಜ್ಞಾನಿಯನ್ನು ಯಾರೂ ಸ್ಮರಿಸಲಿಲ್ಲ.
16ನಾನು ಇದನ್ನು ನೋಡಿ ಬಲಕ್ಕಿಂತ ಜ್ಞಾನವೇ ಶ್ರೇಷ್ಠ, ಆದರೆ ಜನರು ಬಡವನ ಜ್ಞಾನವನ್ನು ತಾತ್ಸಾರ ಮಾಡಿ ಅವನ ಮಾತುಗಳನ್ನು ಗಮನಿಸುವುದಿಲ್ಲ ಅಂದುಕೊಂಡೆನು.
17ಹುಚ್ಚರನ್ನು ಆಳುವವನ ಕೂಗಿಗಿಂತ ಜ್ಞಾನಿಯ ಮೆಲ್ಲನೆಯ ಮಾತುಗಳು ಕಿವಿಗೆ ಕೇಳಿಸುತ್ತದೆ.