4ಜೀವಿತರ ಗುಂಪಿನಲ್ಲಿ ಸೇರಿದವನಿಗೆ ನಿರೀಕ್ಷೆಯುಂಟು. ಸತ್ತ ಸಿಂಹಕ್ಕಿಂತ ಬದುಕಿರುವ ನಾಯಿಯೇ ಲೇಸು.
5ಜೀವಿಸುವವರಿಗೆ ಸಾಯುತ್ತೇವೆಂಬ ತಿಳಿವಳಿಕೆಯು ಉಂಟು. ಸತ್ತವರಿಗೋ ಯಾವ ತಿಳಿವಳಿಕೆಯೂ ಇಲ್ಲ. ಅವರಿಗೆ ಇನ್ನು ಮೇಲೆ ಪ್ರತಿಫಲವು ಇಲ್ಲ. ಅವರ ಜ್ಞಾಪಕವೇ ಇಲ್ಲ.
6ಅವರು ಸತ್ತಾಗಲೇ ಅವರ ಪ್ರೀತಿಯೂ, ಹಗೆಯೂ, ಹೊಟ್ಟೆಕಿಚ್ಚು ಅಳಿದುಹೋಗಿವೆ. ಲೋಕದೊಳಗೆ ನಡೆಯುವ ಯಾವ ಕೆಲಸದಲ್ಲಿಯೂ ಅವರಿಗೆ ಇನ್ನೆಂದಿಗೂ ಪಾಲು ಇಲ್ಲ.
7ಹೋಗು, ನಿನ್ನ ಅನ್ನವನ್ನು ಸಂತೋಷದಿಂದ ಉಣ್ಣು. ನಿನ್ನ ದ್ರಾಕ್ಷಾರಸವನ್ನು ಒಳ್ಳೆಯ ಮನಸ್ಸಿನಿಂದ ಕುಡಿ. ದೇವರು ನಿನ್ನ ಕೆಲಸಗಳನ್ನು ಈಗ ಒಪ್ಪಿಕೊಳ್ಳುತ್ತಾನೆ.
8ನಿನ್ನ ಬಟ್ಟೆಗಳು ಯಾವಾಗಲೂ ಬಿಳುಪಾಗಿರಲಿ. ನಿನ್ನ ತಲೆಗೆ ಎಣ್ಣೆಯ ಕೊರತೆ ಇಲ್ಲದಿರಲಿ.
9ಲೋಕದೊಳಗೆ ದೇವರು ನಿನಗೆ ನೇಮಿಸಿರುವ ವ್ಯರ್ಥ ಜೀವಮಾನದ ವ್ಯರ್ಥ ದಿನಗಳೆಲ್ಲಾ ನಿನ್ನ ಪ್ರಿಯಪತ್ನಿಯೊಡನೆ ಸುಖದಿಂದ ಬದುಕು. ನಿನ್ನ ಬಾಳಿನಲ್ಲಿಯೂ, ನೀನು ಲೋಕದೊಳಗೆ ಪಡುವ ಪ್ರಯಾಸದಲ್ಲಿಯೂ ಇದೇ ನಿನ್ನ ಪಾಲಾಗಿದೆ.
10ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು. ಏಕೆಂದರೆ ನೀನು ಸೇರಬೇಕಾದ ಸಮಾಧಿಯಲ್ಲಿ ಯಾವ ಕೆಲಸವೂ, ಯುಕ್ತಿಯೂ, ತಿಳಿವಳಿಕೆಯೂ, ಜ್ಞಾನವೂ ಇರುವುದಿಲ್ಲ.