Text copied!
Bibles in Kannada

ಪ್ರಸ 9:5-11 in Kannada

Help us?

ಪ್ರಸ 9:5-11 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಜೀವಿಸುವವರಿಗೆ ಸಾಯುತ್ತೇವೆಂಬ ತಿಳಿವಳಿಕೆಯು ಉಂಟು. ಸತ್ತವರಿಗೋ ಯಾವ ತಿಳಿವಳಿಕೆಯೂ ಇಲ್ಲ. ಅವರಿಗೆ ಇನ್ನು ಮೇಲೆ ಪ್ರತಿಫಲವು ಇಲ್ಲ. ಅವರ ಜ್ಞಾಪಕವೇ ಇಲ್ಲ.
6 ಅವರು ಸತ್ತಾಗಲೇ ಅವರ ಪ್ರೀತಿಯೂ, ಹಗೆಯೂ, ಹೊಟ್ಟೆಕಿಚ್ಚು ಅಳಿದುಹೋಗಿವೆ. ಲೋಕದೊಳಗೆ ನಡೆಯುವ ಯಾವ ಕೆಲಸದಲ್ಲಿಯೂ ಅವರಿಗೆ ಇನ್ನೆಂದಿಗೂ ಪಾಲು ಇಲ್ಲ.
7 ಹೋಗು, ನಿನ್ನ ಅನ್ನವನ್ನು ಸಂತೋಷದಿಂದ ಉಣ್ಣು. ನಿನ್ನ ದ್ರಾಕ್ಷಾರಸವನ್ನು ಒಳ್ಳೆಯ ಮನಸ್ಸಿನಿಂದ ಕುಡಿ. ದೇವರು ನಿನ್ನ ಕೆಲಸಗಳನ್ನು ಈಗ ಒಪ್ಪಿಕೊಳ್ಳುತ್ತಾನೆ.
8 ನಿನ್ನ ಬಟ್ಟೆಗಳು ಯಾವಾಗಲೂ ಬಿಳುಪಾಗಿರಲಿ. ನಿನ್ನ ತಲೆಗೆ ಎಣ್ಣೆಯ ಕೊರತೆ ಇಲ್ಲದಿರಲಿ.
9 ಲೋಕದೊಳಗೆ ದೇವರು ನಿನಗೆ ನೇಮಿಸಿರುವ ವ್ಯರ್ಥ ಜೀವಮಾನದ ವ್ಯರ್ಥ ದಿನಗಳೆಲ್ಲಾ ನಿನ್ನ ಪ್ರಿಯಪತ್ನಿಯೊಡನೆ ಸುಖದಿಂದ ಬದುಕು. ನಿನ್ನ ಬಾಳಿನಲ್ಲಿಯೂ, ನೀನು ಲೋಕದೊಳಗೆ ಪಡುವ ಪ್ರಯಾಸದಲ್ಲಿಯೂ ಇದೇ ನಿನ್ನ ಪಾಲಾಗಿದೆ.
10 ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು. ಏಕೆಂದರೆ ನೀನು ಸೇರಬೇಕಾದ ಸಮಾಧಿಯಲ್ಲಿ ಯಾವ ಕೆಲಸವೂ, ಯುಕ್ತಿಯೂ, ತಿಳಿವಳಿಕೆಯೂ, ಜ್ಞಾನವೂ ಇರುವುದಿಲ್ಲ.
11 ನಾನು ಲೋಕದಲ್ಲಿ ತಿರುಗಿ ದೃಷ್ಟಿಸಲು ವೇಗಿಗಳಿಗೆ ಓಟದಲ್ಲಿ ಗೆಲುವಿಲ್ಲ. ಬಲಿಷ್ಠರಿಗೆ ಯುದ್ಧದಲ್ಲಿ ಜಯವಿಲ್ಲ. ಜ್ಞಾನಿಗಳಿಗೆ ಅನ್ನ ಸಿಕ್ಕದು. ವಿವೇಕಿಗಳಿಗೆ ಧನ ಲಭಿಸದು. ಪ್ರವೀಣರಿಗೆ ದಯೆ ದೊರಕದು. ಕಾಲವೂ, ಗತಿಯೂ ಅವರೆಲ್ಲರಿಗೆ ಸಂಭವಿಸುತ್ತದೆ.
ಪ್ರಸ 9 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019