13ಎನ್ನಿನಿಯನು ನನ್ನ ಸ್ತನಗಳ ಮಧ್ಯದಲ್ಲಿನ ರಕ್ತಬೋಳದ ಚೀಲ;
14ನನ್ನ ಪಾಲಿಗೆ ನನ್ನ ನಲ್ಲನು ಏನ್ಗೆದಿಯ ದ್ರಾಕ್ಷಿ ತೋಟಗಳ ಗೋರಂಟೆಯ ಹೂಗೊಂಚಲು.
15ಆಹಾ, ನನ್ನ ಪ್ರಿಯಳೇ, ನೀನು ಎಷ್ಟು ಚೆಲುವೆ, ಆಹಾ, ನೀನು ಎಷ್ಟು ಸುಂದರಿ! ನಿನ್ನ ನೇತ್ರಗಳು ಪಾರಿವಾಳಗಳಂತಿವೆ.
16ಆಹಾ, ಎನ್ನಿನಿಯನೇ, ನೀನೆಷ್ಟು ಸುಂದರ, ನೀನೆಷ್ಟು ಮನೋಹರ! ಹಚ್ಚ ಹಸಿರು ಚಿಗುರುಗಳು ನಮ್ಮ ಮಂಚ,
17ನಮ್ಮ ಮನೆಯ ಛಾವಣಿ ತುರಾಯಿ ಮರಗಳೇ; ತೊಲೆಗಳು ದೇವದಾರು ವೃಕ್ಷಗಳೇ.