Text copied!
Bibles in Kannada

ಪ.ಗೀ. 1:5-9 in Kannada

Help us?

ಪ.ಗೀ. 1:5-9 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆರೂಸಲೇಮಿನ ಮಹಿಳೆಯರೇ, ನಾನು ಕೇದಾರಿನ ಗುಡಾರಗಳಂತೆ ಕಪ್ಪಾಗಿದ್ದರೂ, ಸೊಲೊಮೋನನ ಪರದೆಗಳಂತೆ ಚೆಲುವಾಗಿದ್ದೇನೆ.
6 ನಾನು ಕಪ್ಪಾಗಿದ್ದೇನೆ ಎಂದು ನನ್ನನ್ನು ದಿಟ್ಟಿಸಿ ನೋಡಬೇಡಿರಿ. ನಾನು ಕಪ್ಪಾಗಿರುವುದು ಸೂರ್ಯನ ತಾಪದಿಂದ. ನನ್ನ ಸಹೋದರರು ನನ್ನ ಮೇಲೆ ಕೋಪಗೊಂಡು ದ್ರಾಕ್ಷಿತೋಟಗಳನ್ನು ಕಾಯುವುದಕ್ಕೆ ಇಟ್ಟರು; ಆದುದರಿಂದ ನನ್ನ ಸ್ವಂತ ದ್ರಾಕ್ಷಿ ತೋಟವನ್ನೂ ನಾನು ಕಾಯ್ದುಕೊಳ್ಳಲಾಗಲಿಲ್ಲ.
7 ನನ್ನ ಪ್ರಾಣಪ್ರಿಯನೇ, ನಿನ್ನ ಮಂದೆಯನ್ನು ಎಲ್ಲಿ ಮೇಯಿಸುವೆ? ನಡುಹಗಲಲ್ಲಿ ನಿನ್ನ ಮಂದೆಯು ಎಲ್ಲಿ ವಿಶ್ರಮಿಸುತ್ತಾರೆ? ಹೇಳು. ನಾನೇಕೆ ಅಲೆಮಾರಿಗಳಂತೆ ನಿನ್ನ ಗೆಳೆಯರ ಮಂದೆಗಳ ಹತ್ತಿರ ಅಲೆಯಬೇಕು?
8 ಸ್ತ್ರೀಯರಲ್ಲಿ ಅತಿ ಸುಂದರವಾದ ಹೆಣ್ಣು ನೀನು, ನಿನಗಿದು ಗೊತ್ತಿಲ್ಲವಾದರೆ ಹಿಂಡಿನ ಹೆಜ್ಜೆಯ ಜಾಡನ್ನು ಹಿಡಿದು ಹೋಗಿ, ಕುರುಬರ ಗುಡಾರಗಳ ಬಳಿಯಲ್ಲಿ ನಿನ್ನ ಮೇಕೆಮರಿಗಳನ್ನು ಮೇಯಿಸು.
9 ಪ್ರಿಯಳೇ, ನಿನ್ನನ್ನು ಫರೋಹನ ರಥವನ್ನೆಳೆವ ಹೆಣ್ಣು ಕುದುರೆಗೆ ಹೋಲಿಸಿದ್ದೇನೆ.
ಪ.ಗೀ. 1 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019