6ನಾನು ಕಪ್ಪಾಗಿದ್ದೇನೆ ಎಂದು ನನ್ನನ್ನು ದಿಟ್ಟಿಸಿ ನೋಡಬೇಡಿರಿ. ನಾನು ಕಪ್ಪಾಗಿರುವುದು ಸೂರ್ಯನ ತಾಪದಿಂದ. ನನ್ನ ಸಹೋದರರು ನನ್ನ ಮೇಲೆ ಕೋಪಗೊಂಡು ದ್ರಾಕ್ಷಿತೋಟಗಳನ್ನು ಕಾಯುವುದಕ್ಕೆ ಇಟ್ಟರು; ಆದುದರಿಂದ ನನ್ನ ಸ್ವಂತ ದ್ರಾಕ್ಷಿ ತೋಟವನ್ನೂ ನಾನು ಕಾಯ್ದುಕೊಳ್ಳಲಾಗಲಿಲ್ಲ.
7ನನ್ನ ಪ್ರಾಣಪ್ರಿಯನೇ, ನಿನ್ನ ಮಂದೆಯನ್ನು ಎಲ್ಲಿ ಮೇಯಿಸುವೆ? ನಡುಹಗಲಲ್ಲಿ ನಿನ್ನ ಮಂದೆಯು ಎಲ್ಲಿ ವಿಶ್ರಮಿಸುತ್ತಾರೆ? ಹೇಳು. ನಾನೇಕೆ ಅಲೆಮಾರಿಗಳಂತೆ ನಿನ್ನ ಗೆಳೆಯರ ಮಂದೆಗಳ ಹತ್ತಿರ ಅಲೆಯಬೇಕು?
8ಸ್ತ್ರೀಯರಲ್ಲಿ ಅತಿ ಸುಂದರವಾದ ಹೆಣ್ಣು ನೀನು, ನಿನಗಿದು ಗೊತ್ತಿಲ್ಲವಾದರೆ ಹಿಂಡಿನ ಹೆಜ್ಜೆಯ ಜಾಡನ್ನು ಹಿಡಿದು ಹೋಗಿ, ಕುರುಬರ ಗುಡಾರಗಳ ಬಳಿಯಲ್ಲಿ ನಿನ್ನ ಮೇಕೆಮರಿಗಳನ್ನು ಮೇಯಿಸು.
9ಪ್ರಿಯಳೇ, ನಿನ್ನನ್ನು ಫರೋಹನ ರಥವನ್ನೆಳೆವ ಹೆಣ್ಣು ಕುದುರೆಗೆ ಹೋಲಿಸಿದ್ದೇನೆ.