1ನಾನು ಶಾರೋನಿನ ನೆಲಸಂಪಿಗೆ, ತಗ್ಗಿನ ತಾವರೆ.
2ಸ್ತ್ರೀಯರಲ್ಲಿ ಶ್ರೇಷ್ಠಳು ನೀನು, ನನ್ನ ಪ್ರಿಯಳು ಮುಳ್ಳುಗಳ ಮಧ್ಯದಲ್ಲಿರುವ ತಾವರೆಯಂತಿರುವಳು.
3ನನ್ನ ಪ್ರಿಯನು ಪುರುಷೋತ್ತಮನು ವನವೃಕ್ಷಗಳ ಮಧ್ಯೆ ಸೇಬಿನ ವೃಕ್ಷದಂತಿಹನು. ಅದರ ಫಲವು ನನ್ನ ನಾಲಿಗೆಗೆ ಸುಮಧುರ ನಾನು ಆತನ ನೆರಳಿನಲ್ಲಿ ಕುಳಿತು ಪರಮಾನಂದಗೊಂಡೆನು.
4ಬರಮಾಡಿಕೊಂಡನು ನನ್ನನ್ನು ಔತಣಶಾಲೆಗೆ, ನನ್ನ ಮೇಲೆತ್ತಿದನು ಪ್ರೀತಿ ಎಂಬ ಪತಾಕೆ.