15ತೋಟಗಳನ್ನು ಹಾಳುಮಾಡುವ ನರಿಗಳನ್ನು, ನರಿಮರಿಗಳನ್ನು ಹಿಡಿಯಿರಿ; ಹೂಬಿಟ್ಟಿರುವ ನಮ್ಮ ದ್ರಾಕ್ಷಿ ತೋಟಗಳು ಹಾಳು.
16ಎನ್ನಿನಿಯನು ನನ್ನವನೇ, ನಾನು ಅವನವಳೇ, ನೆಲದಾವರೆಗಳ ಮಧ್ಯದಲ್ಲಿ ಮಂದೆಯನ್ನು ಮೇಯಿಸುವವನಾಗಿದ್ದಾನೆ.
17ಕತ್ತಲು ಕಳೆಯುವ ಮೊದಲು, ಹೊತ್ತು ಮೂಡುವ ಮೊದಲು ಹೊರಟು ಬಾ ನನ್ನ ಪ್ರಿಯನೇ, ಬೇತೆರ್ ಪರ್ವತದಲ್ಲಿ ಜಿಂಕೆಯಂತೆಯೂ ಪ್ರಾಯದ ಹರಿಣದಂತೆಯೂ ಇರು.