7ಯೆರೂಸಲೇಮಿನ ಮಹಿಳೆಯರೇ, ಆತನು ತಾನಾಗಿ ಎಚ್ಚರಗೊಳ್ಳುವವರೆಗೆ ಯಾರೂ ನನ್ನ ಪ್ರಿಯನನ್ನು ಎಚ್ಚರಿಸದಿರಿ, ಆತನ ವಿಶ್ರಾಂತಿಗೆ ಯಾರೂ ಭಂಗ ಮಾಡದಿರಿ ಎಂದು ವನದ ಜಿಂಕೆ ಹರಿಣಗಳ ಮೇಲೆ ನಿಮ್ಮಿಂದ ಪ್ರಮಾಣಮಾಡಿಸುತ್ತೇನೆ.
8ಅಗೋ ನನ್ನ ಕಾಂತನ ಸಪ್ಪಳ! ಅವನು ಬೆಟ್ಟಗಳ ಮೇಲೆ ಹಾರುತ್ತಾ, ಗುಡ್ಡಗಳಲ್ಲಿ ಜಿಗಿಯುತ್ತಾ ಬರುತ್ತಿದ್ದಾನೆ;