8ಅಗೋ ನನ್ನ ಕಾಂತನ ಸಪ್ಪಳ! ಅವನು ಬೆಟ್ಟಗಳ ಮೇಲೆ ಹಾರುತ್ತಾ, ಗುಡ್ಡಗಳಲ್ಲಿ ಜಿಗಿಯುತ್ತಾ ಬರುತ್ತಿದ್ದಾನೆ;
9ನನ್ನ ಪ್ರಿಯನು ಜಿಂಕೆಯಂತೆಯೂ ಪ್ರಾಯದ ಹರಿಣದಂತೆಯೂ ಇದ್ದಾನೆ. ಆಹಾ, ಇಗೋ ನಮ್ಮ ಗೋಡೆಯ ಆಚೆ ನಿಂತು, ಕಿಟಕಿಗಳ ಮೂಲಕ ನೋಡುತ್ತಾನೆ, ಜಾಲಾಂದ್ರಗಳ ಮೂಲಕ ಇಣಿಕುಹಾಕುತ್ತಾನೆ!
10ನನ್ನ ನಲ್ಲನು ನನಗೆ ಹೀಗೆಂದನು, “ನನ್ನ ಪ್ರಿಯತಮೇ, ಎನ್ನ ಸುಂದರಿಯೇ, ಎದ್ದು ನನ್ನೊಂದಿಗೆ ಬಾ!