Text copied!
Bibles in Kannada

ಪ.ಗೀ. 3:5-10 in Kannada

Help us?

ಪ.ಗೀ. 3:5-10 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆರೂಸಲೇಮಿನ ಮಹಿಳೆಯರೇ, ಆತನು ತಾನಾಗಿ ಎಚ್ಚರಗೊಳ್ಳುವವರೆಗೆ ಯಾರೂ ನನ್ನ ಪ್ರಿಯನನ್ನು ಎಚ್ಚರಿಸದಿರಿ, ಆತನ ವಿಶ್ರಾಂತಿಗೆ ಯಾರೂ ಭಂಗ ಮಾಡದಿರಿ ಎಂದು ವನದ ಜಿಂಕೆ ಹರಿಣಗಳ ಮೇಲೆ ನಿಮ್ಮಿಂದ ಪ್ರಮಾಣಮಾಡಿಸುತ್ತೇನೆ.
6 ವರ್ತಕರು ಮಾರುವ ಸಕಲ ಸುಗಂಧತೈಲಗಳಿಂದ, ರಸಗಂಧ, ಸಾಂಬ್ರಾಣಿಧೂಪ ಮುಂತಾದ ದ್ರವ್ಯಗಳಿಂದ ಧೂಮಸ್ತಂಭಗಳೋಪಾದಿಯಲ್ಲಿ ಹೊರಹೊಮ್ಮುತ್ತಿರುವ, ಅರಣ್ಯಮಾರ್ಗವಾಗಿ ಬರುತ್ತಿರುವ ಈ ಮೆರವಣಿಗೆ ಯಾರದು?
7 ಅದೋ, ನೋಡು ಸೊಲೊಮೋನನ ಪಲ್ಲಕ್ಕಿ, ಇಸ್ರಾಯೇಲಿನ ಶೂರರಲ್ಲಿ ಅರುವತ್ತು ಜನರು ಅದರ ಸುತ್ತಲಿದ್ದಾರೆ.
8 ಯುದ್ಧಪ್ರವೀಣರಾದ ಇವರೆಲ್ಲರೂ ಕೈಯಲ್ಲಿ ಕತ್ತಿಯನ್ನು ಹಿಡಿದಿದ್ದಾರೆ. ರಾತ್ರಿಯ ಅಪಾಯದ ನಿಮಿತ್ತ ಪ್ರತಿಯೊಬ್ಬನೂ ಸೊಂಟಕ್ಕೆ ಕತ್ತಿ ಕಟ್ಟಿಕೊಂಡಿದ್ದಾನೆ.
9 ಆ ಪಲ್ಲಕ್ಕಿಯನ್ನು ರಾಜನಾದ ಸೊಲೊಮೋನನು ಲೆಬನೋನಿನ ಮರದಿಂದ ಮಾಡಿಸಿದ್ದಾನೆ.
10 ಅದರ ಕಂಬಗಳನ್ನು ಬೆಳ್ಳಿಯಿಂದಲೂ, ಕುಳಿತು ಒರಗಿಕೊಳ್ಳುವ ಆಸನವನ್ನು ಬಂಗಾರದಿಂದಲೂ, ಆಸನವನ್ನು ಧೂಮ್ರವರ್ಣದ ವಸ್ತ್ರದಿಂದ ಮಾಡಿಸಿದನು. ಅದರ ಮಧ್ಯಭಾಗವನ್ನು ಯೆರೂಸಲೇಮಿನ ಪುತ್ರಿಯರು ತಮ್ಮ ಪ್ರೀತಿಗೆ ಗುರುತಾಗಿ ಕಸೂತಿಯಿಂದ ಅಲಂಕರಿಸಿದರು.
ಪ.ಗೀ. 3 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019