Text copied!
Bibles in Kannada

ಪ.ಗೀ. 4:10-15 in Kannada

Help us?

ಪ.ಗೀ. 4:10-15 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಪ್ರಿಯಳೇ, ವಧುವೇ, ನಿನ್ನ ಪ್ರೀತಿ ಅದೆಷ್ಟೋ ರಮ್ಯ! ನಿನ್ನ ಪ್ರೇಮ ದ್ರಾಕ್ಷಾರಸಕ್ಕಿಂತ ಎಷ್ಟೋ ಉತ್ತಮ! ನಿನ್ನ ತೈಲದ ಪರಿಮಳ ಸಕಲಸುಗಂಧ ದ್ರವ್ಯಗಳಿಗಿಂತ ಎಷ್ಟೋ ಮನೋಹರ!
11 ವಧುವೇ, ನಿನ್ನ ತುಟಿಗಳು ಜೇನುಗರೆಯುತ್ತವೆ; ಜೇನೂ ಮತ್ತು ಹಾಲೂ ನಿನ್ನ ನಾಲಿಗೆಯ ಅಡಿಯಲ್ಲಿವೆ, ನಿನ್ನ ಉಡುಪುಗಳು ಲೆಬನೋನಿನ ಸುಗಂಧ ಸೂಸುತ್ತಿದೆ.
12 ನನ್ನ ಪ್ರಿಯಳು, ನನ್ನ ಮದಲಗಿತ್ತಿಯು, ಸುಭದ್ರವಾದ ಉದ್ಯಾನ, ಬೇಲಿಯೊಳಗೆ ಮುಚ್ಚಿ ಮುದ್ರಿಸಿದ ಚಿಲುಮೆ.
13 ನಿನ್ನ ಉದ್ಯಾನದಲ್ಲಿವೆ ದಾಳಿಂಬೆಯಂತಹ ಉತ್ತಮ ವೃಕ್ಷಗಳು, ಜಟಮಾಂಸಿ ಮತ್ತು ಗೋರಂಟೆಗಳು,
14 ಜಟಮಾಂಸಿ, ಕುಂಕುಮ, ಬಜೆ, ಲವಂಗಚಕ್ಕೆ, ಸಮಸ್ತ ವಿಧವಾದ ಸಾಂಬ್ರಾಣಿ ಗಿಡಗಳು, ರಕ್ತಬೋಳ, ಅಗುರು, ಸಕಲ ಮುಖ್ಯ ಸುಗಂಧದ್ರವ್ಯ ಇವುಗಳೇ ಚಿಗುರುತ್ತವೆ.
15 ಉದ್ಯಾನಗಳಿಗೆ ಹಾದು ಹೋಗುವ ಬುಗ್ಗೆ, ಉಕ್ಕುತ್ತಿರುವ ಬಾವಿ, ಲೆಬನೋನಿನಿಂದ ಹರಿಯುವ ಕಾಲುವೆ ನಿನ್ನಲ್ಲಿವೆ.
ಪ.ಗೀ. 4 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019