Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಪ.ಗೀ. - ಪ.ಗೀ. 5

ಪ.ಗೀ. 5:1-11

Help us?
Click on verse(s) to share them!
1ಪ್ರಿಯಳೇ, ವಧುವೇ, ಇಗೋ ನಾ ಬಂದಿರುವೆ ನನ್ನ ತೋಟದೊಳಗೆ, ನನ್ನ ರಕ್ತಬೋಳ ಸುಗಂಧದ್ರವ್ಯಗಳನ್ನು ಕೂಡಿಸಿರುವೆ, ನನ್ನ ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿರುವೆ, ನನ್ನ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿರುವೆ. ಮಿತ್ರರೇ, ತಿನ್ನಿರಿ. ಪ್ರಿಯರೇ ಕುಡಿಯಿರಿ, ಬೇಕಾದಷ್ಟು ಪಾನಮಾಡಿರಿ.
2ನಾನು ನಿದ್ರೆಗೊಂಡಿದ್ದರೂ ನನ್ನ ಹೃದಯವು ಎಚ್ಚರಗೊಂಡಿತ್ತು. ಇಗೋ, ಎನ್ನಿನಿಯನು ಕದ ತಟ್ಟಿ, “ಪ್ರಿಯಳೇ, ಕಾಂತಳೇ, ಪಾರಿವಾಳವೇ, ನಿರ್ಮಲೆಯೇ, ಬಾಗಿಲು ತೆಗೆ! ನನ್ನ ತಲೆಯ ಮೇಲೆಲ್ಲಾ ಇಬ್ಬನಿಯು ಬಿದ್ದಿದೆ, ನನ್ನ ಕೂದಲು ರಾತ್ರಿ ಬೀಳುವ ಹನಿಗಳಿಂದ ತುಂಬಿದೆ” ಅಂದನು.
3“ನನ್ನ ಒಳಂಗಿಯನ್ನು ತೆಗೆದೆನಲ್ಲಾ, ಅದನ್ನು ಹೇಗೆ ಹಾಕಿಕೊಂಡೇನು? ಪಾದಗಳನ್ನು ತೊಳೆದುಕೊಂಡೆನಲ್ಲಾ, ಅವುಗಳನ್ನು ಹೇಗೆ ಕೊಳೆಮಾಡಿಕೊಳ್ಳಲಿ?” ಎಂದು ನಾನು ಅಂದುಕೊಂಡಾಗ,
4ನನ್ನ ಕಾಂತನು ಬಾಗಿಲ ರಂಧ್ರದಲ್ಲಿ ಕೈ ನೀಡಿದನು, ಅವನಿಗಾಗಿ ನನ್ನ ಮನ ಮಿಡಿಯಿತು.
5ನಾನೆದ್ದು ನನ್ನ ನಲ್ಲನಿಗೆ ಬಾಗಿಲು ತೆರೆಯಲು ಅಗುಳಿಯ ಮೇಲೆ ಕೈಯಿಟ್ಟೆನು, ನನ್ನ ಕೈಗಳಿಂದ ರಕ್ತಬೋಳವು, ನನ್ನ ಬೆರಳುಗಳಿಂದ ಅಚ್ಚರಕ್ತಬೋಳವು ತೊಟ್ಟಿಕ್ಕಿತು.
6ನನ್ನ ಇನಿಯನಿಗೆ ಕದ ತೆಗೆದೆನು, ಅಷ್ಟರಲ್ಲಿ ಅವನು ಹಿಂದಿರುಗಿ ಹೋಗಿದ್ದನು. ನನ್ನೆದೆಯ ಬಡಿತವೇ ನಿಂತಂತಾಯಿತು ಅವನ ದನಿಗೆ. ಎಷ್ಟು ಹುಡುಕಿದರೂ ಸಿಕ್ಕಲಿಲ್ಲ ಅವನು, ಎಷ್ಟು ಕೂಗಿದರೂ ಉತ್ತರವಿಲ್ಲ.
7ಊರಲ್ಲಿ ಸುತ್ತುತ್ತಿರುವ ಕಾವಲುಗಾರರು ನನ್ನನ್ನು ಕಂಡುಹಿಡಿದು, ಹೊಡೆದು ಗಾಯಪಡಿಸಿದರು, ಪೌಳಿಯ ಕಾವಲುಗಾರರು ಮೇಲೊದಿಕೆಯನ್ನು ನನ್ನಿಂದ ಕಿತ್ತುಕೊಂಡರು.
8ಯೆರೂಸಲೇಮಿನ ಮಹಿಳೆಯರೇ, ನೀವು ನನ್ನ ಕಾಂತನನ್ನು ಕಂಡರೆ ನಾನು ಅನುರಾಗದಿಂದ ಅಸ್ವಸ್ಥಳಾಗಿದ್ದೇನೆ ಎಂಬುವುದನ್ನು ಅವನಿಗೆ ತಿಳಿಸಬೇಕೆಂದು ನಿಮ್ಮಿಂದ ಪ್ರಮಾಣಮಾಡಿಸುತ್ತೇನೆ.
9ಸ್ತ್ರೀರತ್ನವೇ, ಇತರರ ಕಾಂತರಿಗಿಂತ ನಿನ್ನ ಕಾಂತನ ವಿಶೇಷತೆಯೇನು? ನಮ್ಮಿಂದ ನೀನು ಹೀಗೆ ಪ್ರಮಾಣಮಾಡಿಸುವುದಕ್ಕೆ ಇತರರ ಕಾಂತರಿಗಿಂತ ನಿನ್ನ ಕಾಂತನ ಅತಿಶಯವೇನು?
10ನನ್ನ ನಲ್ಲನು ತೇಜೋಮಯವಾದ ಕೆಂಪು ಬಣ್ಣವುಳ್ಳವನು; ಅವನು ಹತ್ತು ಸಾವಿರ ಜನರಲ್ಲಿ ಧ್ವಜಪ್ರಾಯನು.
11ಅವನ ತಲೆಯು ಚೊಕ್ಕ ಬಂಗಾರದಂತಿದೆ, ಗುಂಗುರು ಗುಂಗುರಾಗಿರುವ ಅವನ ಕೂದಲು ಕಾಗೆಯಂತೆ ಕಪ್ಪಾಗಿದೆ.

Read ಪ.ಗೀ. 5ಪ.ಗೀ. 5
Compare ಪ.ಗೀ. 5:1-11ಪ.ಗೀ. 5:1-11