7ಊರಲ್ಲಿ ಸುತ್ತುತ್ತಿರುವ ಕಾವಲುಗಾರರು ನನ್ನನ್ನು ಕಂಡುಹಿಡಿದು, ಹೊಡೆದು ಗಾಯಪಡಿಸಿದರು, ಪೌಳಿಯ ಕಾವಲುಗಾರರು ಮೇಲೊದಿಕೆಯನ್ನು ನನ್ನಿಂದ ಕಿತ್ತುಕೊಂಡರು.
8ಯೆರೂಸಲೇಮಿನ ಮಹಿಳೆಯರೇ, ನೀವು ನನ್ನ ಕಾಂತನನ್ನು ಕಂಡರೆ ನಾನು ಅನುರಾಗದಿಂದ ಅಸ್ವಸ್ಥಳಾಗಿದ್ದೇನೆ ಎಂಬುವುದನ್ನು ಅವನಿಗೆ ತಿಳಿಸಬೇಕೆಂದು ನಿಮ್ಮಿಂದ ಪ್ರಮಾಣಮಾಡಿಸುತ್ತೇನೆ.
9ಸ್ತ್ರೀರತ್ನವೇ, ಇತರರ ಕಾಂತರಿಗಿಂತ ನಿನ್ನ ಕಾಂತನ ವಿಶೇಷತೆಯೇನು? ನಮ್ಮಿಂದ ನೀನು ಹೀಗೆ ಪ್ರಮಾಣಮಾಡಿಸುವುದಕ್ಕೆ ಇತರರ ಕಾಂತರಿಗಿಂತ ನಿನ್ನ ಕಾಂತನ ಅತಿಶಯವೇನು?
10ನನ್ನ ನಲ್ಲನು ತೇಜೋಮಯವಾದ ಕೆಂಪು ಬಣ್ಣವುಳ್ಳವನು; ಅವನು ಹತ್ತು ಸಾವಿರ ಜನರಲ್ಲಿ ಧ್ವಜಪ್ರಾಯನು.