Text copied!
Bibles in Kannada

ಪ.ಗೀ. 5:9-14 in Kannada

Help us?

ಪ.ಗೀ. 5:9-14 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಸ್ತ್ರೀರತ್ನವೇ, ಇತರರ ಕಾಂತರಿಗಿಂತ ನಿನ್ನ ಕಾಂತನ ವಿಶೇಷತೆಯೇನು? ನಮ್ಮಿಂದ ನೀನು ಹೀಗೆ ಪ್ರಮಾಣಮಾಡಿಸುವುದಕ್ಕೆ ಇತರರ ಕಾಂತರಿಗಿಂತ ನಿನ್ನ ಕಾಂತನ ಅತಿಶಯವೇನು?
10 ನನ್ನ ನಲ್ಲನು ತೇಜೋಮಯವಾದ ಕೆಂಪು ಬಣ್ಣವುಳ್ಳವನು; ಅವನು ಹತ್ತು ಸಾವಿರ ಜನರಲ್ಲಿ ಧ್ವಜಪ್ರಾಯನು.
11 ಅವನ ತಲೆಯು ಚೊಕ್ಕ ಬಂಗಾರದಂತಿದೆ, ಗುಂಗುರು ಗುಂಗುರಾಗಿರುವ ಅವನ ಕೂದಲು ಕಾಗೆಯಂತೆ ಕಪ್ಪಾಗಿದೆ.
12 ಅವನ ಕಣ್ಣುಗಳೋ ತುಂಬಿತುಳುಕುವ ತೊರೆಗಳ ಹತ್ತಿರ ತಂಗುವ, ಕ್ಷೀರದಲ್ಲಿ ಸ್ನಾನಮಾಡುವ ಪಾರಿವಾಳಗಳಂತಿವೆ.
13 ಅವನ ಕೆನ್ನೆಗಳು ಕರ್ಣಕುಂಡಲ ಗಿಡಗಳ ಪಾತಿಗಳಂತೆಯೂ ಸುಗಂಧಸಸ್ಯಗಳು ಬೆಳೆಯುವ ದಿಬ್ಬಗಳಂತೆಯೂ ಇವೆ; ಅಚ್ಚರಕ್ತಬೋಳವನ್ನು ಸುರಿಸುವ ಅವನ ತುಟಿಗಳು ಕೆಂದಾವರೆಗಳೇ.
14 ಅವನ ಕೈಗಳು ಪೀತರತ್ನ ಖಚಿತವಾದ ಬಂಗಾರದ ಸಲಾಕಿಗಳೋಪಾದಿಯಲ್ಲಿವೆ, ಅವನ ಮೈ ಇಂದ್ರನೀಲಮಯವಾದ ದಂತಫಲಕದ ಹಾಗಿದೆ.
ಪ.ಗೀ. 5 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019