4ನನ್ನ ಪ್ರಿಯಳೇ, ನೀನು ತಿರ್ಚದಂತೆ ಸುಂದರಿ, ಯೆರೂಸಲೇಮಿನ ಹಾಗೆ ಮನೋಹರಿ, ಧ್ವಜಗಳ್ಳುಳ್ಳ ಸೈನ್ಯದ ಹಾಗೆ ಭಯಂಕರಿ!
5ನಿನ್ನ ಕಣ್ಣುಗಳನ್ನು ನನ್ನ ಕಡೆಯಿಂದ ತಿರುಗಿಸು, ಅವು ನನ್ನನ್ನು ಹೆದರಿಸುತ್ತವೆ. ನಿನ್ನ ಕೂದಲು ಗಿಲ್ಯಾದ್ ಬೆಟ್ಟದ ಪಾರ್ಶ್ವದಲ್ಲಿ ಮಲಗಿರುವ ಆಡುಮಂದೆಯಂತಿದೆ.
6ಉಣ್ಣೆ ಕತ್ತರಿಸಿ ಸ್ನಾನಮಾಡಿಸಿದ ಕುರಿಮಂದೆಯ ಬಿಳುಪಿನಂತಿವೆ ನಿನ್ನ ಹಲ್ಲುಗಳು, ಯಾವುದೂ ಒಂಟಿಯಾಗಿರದೆ ಎಲ್ಲವೂ ಒಟ್ಟಾಗಿ ಜೋಡಿಯಾಗಿವೆ.
7ಮುಸುಕಿನೊಳಗಿನ ನಿನ್ನ ಕೆನ್ನೆಯು ಹೋಳು ಮಾಡಿದ ದಾಳಿಂಬೆಯ ತಿರುಳಿನಂತಿದೆ.
8ಅರಸನಿಗೆ ರಾಣಿಯರು ಅರುವತ್ತು ಮಂದಿ, ಉಪಪತ್ನಿಯರು ಎಂಬತ್ತು ಮಂದಿ, ಯುವತಿಯರು ಲೆಕ್ಕವಿಲ್ಲದಷ್ಟು.
9ನನ್ನ ಪಾರಿವಾಳವು, ನನ್ನ ನಿರ್ಮಲೆಯು ಒಬ್ಬಳೇ, ಇವಳು ಏಕಮಾತ್ರ ಪುತ್ರಿ ತಾಯಿಗೆ, ಮುದ್ದುಮಗಳು ಹೆತ್ತವಳಿಗೆ. ಧನ್ಯಳೆಂದು ಹೊಗಳಿದರು ಯುವತಿಯರು ನೋಡಿ, ರಾಣಿಯರೂ, ಉಪಪತ್ನಿಯರೂ ಕೊಂಡಾಡಿದರು ಈ ರೀತಿ.