7ಮುಸುಕಿನೊಳಗಿನ ನಿನ್ನ ಕೆನ್ನೆಯು ಹೋಳು ಮಾಡಿದ ದಾಳಿಂಬೆಯ ತಿರುಳಿನಂತಿದೆ.
8ಅರಸನಿಗೆ ರಾಣಿಯರು ಅರುವತ್ತು ಮಂದಿ, ಉಪಪತ್ನಿಯರು ಎಂಬತ್ತು ಮಂದಿ, ಯುವತಿಯರು ಲೆಕ್ಕವಿಲ್ಲದಷ್ಟು.
9ನನ್ನ ಪಾರಿವಾಳವು, ನನ್ನ ನಿರ್ಮಲೆಯು ಒಬ್ಬಳೇ, ಇವಳು ಏಕಮಾತ್ರ ಪುತ್ರಿ ತಾಯಿಗೆ, ಮುದ್ದುಮಗಳು ಹೆತ್ತವಳಿಗೆ. ಧನ್ಯಳೆಂದು ಹೊಗಳಿದರು ಯುವತಿಯರು ನೋಡಿ, ರಾಣಿಯರೂ, ಉಪಪತ್ನಿಯರೂ ಕೊಂಡಾಡಿದರು ಈ ರೀತಿ.
10ಅರುಣೋದಯದಂತೆ ಉದಯಿಸುವಂತಿರುವಳು, ಚಂದ್ರನಂತೆ ಸೌಮ್ಯ ಸುಂದರಿಯಿವಳು, ಸೂರ್ಯನಂತೆ ಶುಭ್ರಳು, ಧ್ವಜಗಳುಳ್ಳ ಸೈನ್ಯದ ಹಾಗೆ ಭಯಂಕರಳು ಆಗಿರುವ ಇವಳಾರು?
11ದ್ರಾಕ್ಷಿಯು ಚಿಗುರಿದೆಯೋ, ದಾಳಿಂಬೆ ಗಿಡಗಳು ಹೂಬಿಟ್ಟಿವೆಯೋ ಎಂದು ತಗ್ಗಿನಲ್ಲಿ ಬೆಳೆದ ಸಸ್ಯಗಳನ್ನು ನೋಡಲು ಬಾದಾಮಿಯ ತೋಟಕ್ಕೆ ನಾನು ಹೋಗಿದ್ದೆ.
12ಇದ್ದಕ್ಕಿದ್ದ ಹಾಗೆ ನಾಯಕನಾಗಿ ನಾನು ಬಯಸಿದಂತೆ ದೇಶ ಪ್ರಧಾನರ ರಥಗಳ ನಡುವೆ ನಾನಿರುವುದನ್ನು ಅರಿತೆನು.