8ಅರಸನಿಗೆ ರಾಣಿಯರು ಅರುವತ್ತು ಮಂದಿ, ಉಪಪತ್ನಿಯರು ಎಂಬತ್ತು ಮಂದಿ, ಯುವತಿಯರು ಲೆಕ್ಕವಿಲ್ಲದಷ್ಟು.
9ನನ್ನ ಪಾರಿವಾಳವು, ನನ್ನ ನಿರ್ಮಲೆಯು ಒಬ್ಬಳೇ, ಇವಳು ಏಕಮಾತ್ರ ಪುತ್ರಿ ತಾಯಿಗೆ, ಮುದ್ದುಮಗಳು ಹೆತ್ತವಳಿಗೆ. ಧನ್ಯಳೆಂದು ಹೊಗಳಿದರು ಯುವತಿಯರು ನೋಡಿ, ರಾಣಿಯರೂ, ಉಪಪತ್ನಿಯರೂ ಕೊಂಡಾಡಿದರು ಈ ರೀತಿ.
10ಅರುಣೋದಯದಂತೆ ಉದಯಿಸುವಂತಿರುವಳು, ಚಂದ್ರನಂತೆ ಸೌಮ್ಯ ಸುಂದರಿಯಿವಳು, ಸೂರ್ಯನಂತೆ ಶುಭ್ರಳು, ಧ್ವಜಗಳುಳ್ಳ ಸೈನ್ಯದ ಹಾಗೆ ಭಯಂಕರಳು ಆಗಿರುವ ಇವಳಾರು?