Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಪ.ಗೀ. - ಪ.ಗೀ. 7

ಪ.ಗೀ. 7:2-10

Help us?
Click on verse(s) to share them!
2ನಿನ್ನ ಹೊಕ್ಕಳು ಮಿಶ್ರಪಾನ ತುಂಬಿದ ಗುಂಡು ಬಟ್ಟಲು, ನಿನ್ನ ಹೊಟ್ಟೆ ನೆಲದಾವರೆಗಳಿಂದ ಅಲಂಕೃತವಾದ ಗೋದಿಯ ರಾಶಿ.
3ನಿನ್ನ ಸ್ತನಗಳೆರಡೂ ಜಿಂಕೆಯ ಅವಳಿಮರಿಗಳಂತಿವೆ.
4ನಿನ್ನ ಕೊರಳು ದಂತದ ಗೋಪುರ, ನಿನ್ನ ನೇತ್ರಗಳು ಹೆಷ್ಬೋನಿನಲ್ಲಿನ ಬತ್ ರಬ್ಬೀಮ್ ಬಾಗಿಲ ಬಳಿಯ ಕೊಳಗಳಂತಿವೆ. ನಿನ್ನ ಮೂಗು ದಮಸ್ಕದ ಕಡೆಗಿರುವ ಲೆಬನೋನಿನ ಬುರುಜಿನಂತಿದೆ.
5ಕರ್ಮೆಲ್ ಬೆಟ್ಟದಂತೆ ಗಂಭೀರವಾಗಿದೆ ನಿನ್ನ ಶಿರಸ್ಸು, ನಿನ್ನ ತಲೆಗೂದಲಿಗಿದೆ ಥಳಥಳಿಸುವ ನುಣುಪುಹೊಳಪಿನ ಬಣ್ಣ, ಅದರಲ್ಲಿದೆ ಅರಸನನ್ನೇ ಸೆರೆಹಿಡಿಯುವಂಥ ಆಕರ್ಷಣೆ.
6ಪ್ರೇಯಸಿಯೇ, ಸಕಲ ಸೌಂದರ್ಯ ಸೊಬಗಿನಿಂದ ನೀನೆಷ್ಟು ಸುಂದರ, ನೀನೆಷ್ಟು ಮನೋಹರ!
7ನೀಳವಾದ ನಿನ್ನ ಆಕಾರವು ಖರ್ಜೂರದ ಮರ, ನಿನ್ನ ಸ್ತನಗಳೇ ಅದರ ಗೊಂಚಲುಗಳು.
8ನಾನು ಆ ಮರವನ್ನು ಹತ್ತಿ, ರೆಂಬೆಗಳನ್ನು ಹಿಡಿಯುವೆನು ಅಂದುಕೊಂಡೆನು. ನಿನ್ನ ಸ್ತನಗಳು ನನಗೆ ದ್ರಾಕ್ಷಿಯ ಗೊಂಚಲುಗಳಂತಿರಲಿ, ಸೇಬುಹಣ್ಣಿನ ಪರಿಮಳದಂತೆ ನಿನ್ನ ಉಸಿರು.
9ನಿನ್ನ ಚುಂಬನ ಉತ್ತಮ ದ್ರಾಕ್ಷಾರಸದ ಹಾಗಿರಲಿ, ನಿದ್ರಿಸುವವರ ತುಟಿಗಳಲ್ಲಿ ನಯವಾಗಿ ಹರಿಯುವ ಈ ರಸವು ನನ್ನ ನಲ್ಲೆಯಾದ ನಿನ್ನಲ್ಲಿಯೂ ಮೆಲ್ಲನೆ ಇಳಿದು ಬರುವುದು.
10ನಾನು ನನ್ನ ನಲ್ಲನ ನಲ್ಲೆ, ಅವನ ಆಶೆಯು ನನ್ನ ಮೇಲೆ.

Read ಪ.ಗೀ. 7ಪ.ಗೀ. 7
Compare ಪ.ಗೀ. 7:2-10ಪ.ಗೀ. 7:2-10