9ಅವಳು ಕೋಟೆಯಾದರೆ ಅದರ ಮೇಲೆ ಬೆಳ್ಳಿಯ ಬುರುಜನ್ನು ಕಟ್ಟುವೆವು, ಬಾಗಿಲಾದರೆ ದೇವದಾರು ಹಲಗೆಗಳಿಂದ ಭದ್ರಪಡಿಸುವೆವು.
10ನಾನು ಕೋಟೆ; ನನ್ನ ಸ್ತನಗಳು ಅದರ ಬುರುಜುಗಳು, ಹೀಗಿದ್ದು ಅವನ ದೃಷ್ಟಿಯಲ್ಲಿ ನನಗೆ ದಯೆ ದೊರಕಿತ್ತು.
11ಸೊಲೊಮೋನನು ಬಾಲ್ಹಾಮೋನಿನಲ್ಲಿ ಇದ್ದ ತನ್ನ ದ್ರಾಕ್ಷಿ ತೋಟವನ್ನು ಗುತ್ತಿಗೆಗೆ ಕೊಟ್ಟನು, ಪ್ರತಿಯೊಬ್ಬ ಗುತ್ತಿಗೆದಾರ ತೆರಬೇಕಾಗಿತ್ತು ಸಾವಿರ ಬೆಳ್ಳಿ ನಾಣ್ಯಗಳನ್ನು.
12ಸೊಲೊಮೋನನೇ, ಆ ಸಾವಿರ ಬೆಳ್ಳಿ ನಾಣ್ಯ ನಿನಗಿರಲಿ, ಅದರ ಮೇಲ್ವಿಚಾರಕರಿಗೆ ಇನ್ನೂರು ನಾಣ್ಯ ಸೇರಲಿ; ನನ್ನದೇ ಆಗಿರುವ ನನ್ನ ತೋಟವು ನನ್ನ ವಶದಲ್ಲಿಯೇ ಇದೆ.
13ಉದ್ಯಾನದಲ್ಲಿ ವಾಸಿಸುವವಳೇ ಗೆಳೆಯರು ನಿನ್ನ ಧ್ವನಿ ಕೇಳಬೇಕೆಂದಿದ್ದಾರೆ, ನನಗೂ ಆ ಧ್ವನಿ ಕೇಳಿಸಲಿ.