Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಫಿಲಿಪ್ಪಿ - ಫಿಲಿಪ್ಪಿ 2

ಫಿಲಿಪ್ಪಿ 2:1-15

Help us?
Click on verse(s) to share them!
1ಕ್ರಿಸ್ತನಿಂದ ಪ್ರೋತ್ಸಾಹ, ಪ್ರೀತಿಯ ಸಾಂತ್ವನ, ಪವಿತ್ರಾತ್ಮನ ಅನ್ಯೋನ್ಯತೆ, ಕಾರುಣ್ಯದಯಾರಸಗಳು ಉಂಟಾಗುವುದಾದರೆ,
2ನೀವೆಲ್ಲರು ಒಂದೇ ಮನಸ್ಸುವುಳ್ಳವರಾಗಿ, ಒಂದೇ ಪ್ರೀತಿಯುಳ್ಳವರಾಗಿ, ಅನ್ಯೋನ್ಯಭಾವವುಳ್ಳವರಾಗಿ ಹಾಗೂ ಒಂದೇ ಗುರಿಯಿಟ್ಟುಕೊಂಡವರಾಗಿ ನನ್ನ ಸಂತೋಷವನ್ನು ಪರಿಪೂರ್ಣಮಾಡಿರಿ.
3ಸ್ವಾರ್ಥದಿಂದಾಗಲಿ, ಒಣ ಹೆಮ್ಮೆಯಿಂದಾಗಲಿ ಯಾವುದನ್ನೂ ಮಾಡದೆ, ಪ್ರತಿಯೊಬ್ಬನು ದೀನಭಾವದಿಂದ ಮತ್ತೊಬ್ಬರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ.
4ನಿಮ್ಮಲ್ಲಿ ಪ್ರತಿಯೊಬ್ಬನು ಸ್ವಹಿತವನ್ನು ಮಾತ್ರ ನೋಡದೆ ಪರಹಿತವನ್ನು ಸಹ ನೋಡಲಿ.
5ಕ್ರಿಸ್ತ ಯೇಸುವಿನಲ್ಲಿದ್ದಂಥ ಮನಸ್ಸು ನಿಮ್ಮಲ್ಲಿಯೂ ಇರಲಿ.
6ಆತನು ದೇವಸ್ವರೂಪನಾಗಿದ್ದರೂ, ದೇವರಿಗೆ ಸರಿಸಮಾನನಾಗಿರುವನೆಂಬ ಅಮೂಲ್ಯ ಪದವಿಯನ್ನು ಬಿಡಲೊಲ್ಲೆನು ಎಂದೆಣಿಸದೆ,
7ತನ್ನನ್ನು ಬರಿದು ಮಾಡಿಕೊಂಡು ದಾಸನ ರೂಪವನ್ನು ಧರಿಸಿಕೊಂಡು ಮನುಷ್ಯರಿಗೆ ಸಮನಾದನು. ಮನುಷ್ಯನಾಕಾರದಲ್ಲಿ ಕಾಣಿಸಿಕೊಂಡನು.
8ಆತನು ತನ್ನನ್ನು ತಗ್ಗಿಸಿಕೊಂಡು ಮರಣವನ್ನು ಅಂದರೆ ಶಿಲುಬೆಯ ಮರಣವನ್ನಾದರೂ ಹೊಂದುವಷ್ಟು ವಿಧೇಯನಾದನು.
9ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತ ಸ್ಥಾನಕ್ಕೆ ಏರಿಸಿ, ಎಲ್ಲಾ ಹೆಸರುಗಳಿಗಿಂತ ಶ್ರೇಷ್ಠವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ.
10ಆದ್ದರಿಂದ ಸ್ವರ್ಗ ಮರ್ತ್ಯ ಪಾತಾಳಗಳಲ್ಲಿರುವವರೆಲ್ಲರೂ ಯೇಸುವಿನ ಹೆಸರಿನಲ್ಲಿ ಮೊಣಕಾಲೂರಿ ಅಡ್ಡಬಿದ್ದು,
11ತಂದೆಯಾದ ದೇವರ ಮಹಿಮೆಗಾಗಿ ಪ್ರತಿಯೊಂದು ನಾಲಿಗೆಯು ಯೇಸು ಕ್ರಿಸ್ತನನ್ನು ಕರ್ತನೆಂದು ಅರಿಕೆಮಾಡುವುದು.
12ಹೀಗಿರುವಲ್ಲಿ ನನ್ನ ಪ್ರಿಯರೇ, ನೀವು ನನ್ನ ಮಾತನ್ನು ಯಾವಾಗಲೂ ಅನುಸರಿಸಿದಂತೆ ಈಗಲೂ ಅನುಸರಿಸಿರಿ. ನಾನು ನಿಮ್ಮಲ್ಲಿರುವಾಗ ಮಾತ್ರವಲ್ಲದೆ, ನಾನಿಲ್ಲದಿರುವಾಗಲೂ ಬಹು ಹೆಚ್ಚಾಗಿ ಮನೋಭೀತಿಯಿಂದ ನಡುಗುವವರಾಗಿ ನಿಮ್ಮ ನಿಮ್ಮ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ.
13ಯಾಕೆಂದರೆ ದೇವರೇ ತನ್ನ ಸುಚಿತ್ತವನ್ನು ನೆರವೇರಿಸಬೇಕೆಂದು ನಿಮ್ಮಲ್ಲಿ ಉದ್ದೇಶವನ್ನೂ ಮತ್ತು ಪ್ರಯತ್ನವನ್ನೂ ಉಂಟುಮಾಡುವವನಾಗಿದ್ದಾನೆ.
14ಗೊಣಗುಟ್ಟದೆಯೂ, ವಿವಾದಗಳಿಲ್ಲದೆಯೂ ಎಲ್ಲವನ್ನು ಮಾಡಿರಿ.
15ಹೀಗೆ ನೀವು ನಿರ್ದೋಷಿಗಳೂ ಹಾಗೂ ಯಥಾರ್ಥಮನಸ್ಸುಳ್ಳವರೂ ಆಗಿದ್ದು ವಕ್ರಬುದ್ಧಿಯುಳ್ಳ ಮೂರ್ಖ ಜಾತಿಯ ಮಧ್ಯದಲ್ಲಿ ದೇವರ ನಿಷ್ಕಳಂಕರಾದ ಮಕ್ಕಳಾಗಿರುವಿರಿ.

Read ಫಿಲಿಪ್ಪಿ 2ಫಿಲಿಪ್ಪಿ 2
Compare ಫಿಲಿಪ್ಪಿ 2:1-15ಫಿಲಿಪ್ಪಿ 2:1-15