Text copied!
Bibles in Kannada

ಫಿಲಿಪ್ಪಿ 4:10-14 in Kannada

Help us?

ಫಿಲಿಪ್ಪಿ 4:10-14 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನನ್ನ ವಿಷಯದಲ್ಲಿ ನಿಮಗಿರುವ ಕಾಳಜಿಯು ಇಷ್ಟು ದಿನಗಳಾದ ಮೇಲೆ ಪುನಃ ಚಿಗುರಿದಕ್ಕೆ ನಾನು ಕರ್ತನಲ್ಲಿ ಹೆಚ್ಚಾಗಿ ಸಂತೋಷಪಡುತ್ತೇನೆ. ಇಂಥ ಯೋಚನೆ ನಿಮ್ಮಲ್ಲಿ ಈ ಮೊದಲೇ ಇದ್ದಿದ್ದರೂ, ಸಹಾಯ ಮಾಡುವುದಕ್ಕೆ ಸರಿಯಾದ ಸಂದರ್ಭ ಒದಗಿ ಬಂದಿರಲಿಲ್ಲ.
11 ನನ್ನ ಅಗತ್ಯಗಳ ಕುರಿತಾಗಿ ನಾನು ಇದನ್ನು ಹೇಳುತ್ತಿಲ್ಲ, ನಾನಂತೂ ಇದ್ದ ಸ್ಥಿತಿಯಲ್ಲಿಯೇ ಸಂತೃಪ್ತನಾಗಿರುವುದನ್ನು ಕಲಿತುಕೊಂಡಿದ್ದೇನೆ.
12 ಬಡವನಾಗಿರಲೂ ಬಲ್ಲೆನು, ಸಮೃದ್ಧಿಯುಳ್ಳವನಾಗಿರಲೂ ಬಲ್ಲೆನು. ನಾನು ತೃಪ್ತನಾಗಿದ್ದರೂ, ಹಸಿದವನಾಗಿದ್ದರೂ, ಸಮೃದ್ಧಿಯುಳ್ಳವನಾದರೂ, ಕೊರತೆಯುಳ್ಳವನಾದರೂ ಯಾವ ತರದ ಸ್ಥಿತಿಯಲ್ಲಿರುವವನಾದರೂ ಅದರ ಗುಟ್ಟು ನನಗೆ ತಿಳಿದಿದೆ.
13 ನನ್ನನ್ನು ಬಲಪಡಿಸುವವನ ಮುಖಾಂತರ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ.
14 ಹೀಗಿದ್ದರೂ ನೀವು ನನ್ನ ಸಂಕಟದಲ್ಲಿ ಸಹಭಾಗಿಗಳಾಗಿದ್ದದ್ದು ಒಳ್ಳೆಯದಾಯಿತು.
ಫಿಲಿಪ್ಪಿ 4 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019