Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಮಾರ್ಕ - ಮಾರ್ಕ 13

ಮಾರ್ಕ 13:24-32

Help us?
Click on verse(s) to share them!
24ಇದಲ್ಲದೆ ಆ ದಿನಗಳ ಸಂಕಟವು ತೀರಿದ ನಂತರ; “‘ಸೂರ್ಯನು ಕತ್ತಲಾಗಿ ಹೋಗುವನು.
25ಚಂದ್ರನು ತನ್ನ ಬೆಳಕು ಕೊಡದೆ ಇರುವನು. ನಕ್ಷತ್ರಗಳು ಆಕಾಶದಿಂದ ಬೀಳುವವು. ಮತ್ತು ಪರಲೋಕದಲ್ಲಿ ಶಕ್ತಿಗಳು ಕದಲುವವು.’
26ಆಗಮನುಷ್ಯಕುಮಾರನು ಮಹಾಬಲದಿಂದಲೂ ಮಹಿಮೆಯಿಂದಲೂ ಮೇಘಗಳಲ್ಲಿ ಬರುವುದನ್ನು ಅವರು ನೋಡುವರು.
27ಮತ್ತು ಆತನು ತನ್ನ ದೂತರನ್ನು ಕಳುಹಿಸಿ ಭೂಮಿಯ ಕಟ್ಟಕಡೆಯಿಂದ ಆಕಾಶದ ಕಟ್ಟಕಡೆಯವರೆಗೆ ತಾನು ಆರಿಸಿಕೊಂಡವರನ್ನು ನಾಲ್ಕುದಿಕ್ಕುಗಳಿಂದ ಒಟ್ಟುಗೂಡಿಸುವನು.”
28“ಅಂಜೂರ ಮರವನ್ನು ನೋಡಿ ಒಂದು ಪಾಠವನ್ನು ಕಲಿತುಕೊಳ್ಳಿ. ಅದರ ಕೊಂಬೆಗಳಲ್ಲಿ ಇನ್ನೂ ಎಳೆದಾಗಿ ಎಲೆಗಳು ಚಿಗುರುವಾಗ ಬೇಸಿಗೆಯು ಸಮೀಪಿಸಿತು ಎಂದು ಅರಿತುಕೊಳ್ಳುತ್ತಿರಲ್ಲಾ.
29ಹಾಗೆಯೇ ಇವೆಲ್ಲವೂ ಆಗುವುದನ್ನು ನೀವು ನೋಡುವಾಗ ಬಾಗಿಲ ಹತ್ತಿರದಲ್ಲಿಯೇ ಇದ್ದೆ ಎಂದು ತಿಳಿದುಕೊಳ್ಳಿರಿ.
30ಇದೆಲ್ಲವೂ ನೆರವೇರುವವರೆಗೂ ಈ ಸಂತತಿಯು ಅಳಿದು ಹೋಗುವುದೇ ಇಲ್ಲವೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.
31ಆಕಾಶವೂ, ಭೂಮಿಯೂ ಅಳಿದು ಹೋಗುವವು; ಆದರೆ ನನ್ನ ವಾಕ್ಯವು ಅಳಿದು ಹೋಗುವುದೇ ಇಲ್ಲ.”
32“ಇದಲ್ಲದೆ ಆ ದಿನದ ಮತ್ತು ಆ ಗಳಿಗೆಯ ವಿಷಯವಾಗಿ ನನ್ನ ತಂದೆಗೆ ಹೊರತು ಮತ್ತಾರಿಗೂ ತಿಳಿಯದು, ಪರಲೋಕದಲ್ಲಿರುವ ದೂತರಿಗಾಗಲಿ, ಮಗನಿಗಾಗಲಿ ತಿಳಿಯದು.

Read ಮಾರ್ಕ 13ಮಾರ್ಕ 13
Compare ಮಾರ್ಕ 13:24-32ಮಾರ್ಕ 13:24-32