Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಮಾರ್ಕ - ಮಾರ್ಕ 4

ಮಾರ್ಕ 4:23-33

Help us?
Click on verse(s) to share them!
23ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ” ಎಂದು ಹೇಳಿದನು.
24ಮತ್ತು ಆತನು ಅವರಿಗೆ; “ನೀವು ಕಿವಿಗೊಡುವ ವಿಷಯದಲ್ಲಿ ಎಚ್ಚರಿಕೆಯಾಗಿರಿ.ನೀವು ಅಳೆಯುವ ಅಳತೆಯಿಂದಲೇ ನಿಮ್ಮನ್ನೂ ಅಳೆಯುವರು; ನಿಮಗೆ ಇನ್ನೂ ಅಧಿಕವಾಗಿ ಸೇರಿಸಿಕೊಡುವರು.
25ಇದ್ದವನಿಗೆ ಕೊಡಲ್ಪಡುವುದು; ಇಲ್ಲದವನ ಕಡೆಯಿಂದ ಇದ್ದುದನ್ನೂ ತೆಗೆಯಲ್ಪಡುವುದು” ಎಂದು ಹೇಳಿದನು.
26ಇದಲ್ಲದೆ ಆತನು ಅವರಿಗೆ ಮತ್ತೆ ಹೇಳಿದೇನಂದರೆ; “ಒಬ್ಬನು ಭೂಮಿಯಲ್ಲಿ ಬೀಜವನ್ನು ಬಿತ್ತಿದ ನಂತರ ಅವನು ರಾತ್ರಿಯಲ್ಲಿ ಮಲಗಿದ್ದಾಗಲೂ, ಹಗಲು ಎಚ್ಚರವಿರುವಾಗಲೂ
27ಅವನಿಗೆ ತಿಳಿಯದ ರೀತಿಯಲ್ಲಿ ಆ ಬೀಜದ ಸಸಿ ಮೊಳೆತು ಬೆಳೆಯುವುದು. ಇದರಂತೆ ದೇವರ ರಾಜ್ಯವೂ ಕೂಡ.
28ಭೂಮಿಯು ಮೊದಲು ಮೊಳಕೆಯನ್ನೂ, ಆ ಮೇಲೆ ತೆನೆಯನ್ನೂ, ತರುವಾಯ ತೆನೆಯಲ್ಲಿ ತುಂಬಾ ಕಾಳನ್ನೂ ತನ್ನಷ್ಟಕ್ಕೆ ತಾನೇ ಹುಟ್ಟಿಸುತ್ತದೆ.
29ಆದರೆ ಫಲಮಾಗಿದಾಗ ಸುಗ್ಗಿಕಾಲ ಬಂದಿತೆಂದು ವ್ಯವಸಾಯಗಾರನು ಅದನ್ನು ಕೊಯ್ಯಲು ಕುಡುಗೋಲನ್ನು ಬಳಸುತ್ತಾನೆ” ಅಂದನು.
30ಇನ್ನೂ ಆತನು ಹೇಳಿದ್ದು; “ದೇವರ ರಾಜ್ಯವನ್ನು ಯಾವುದಕ್ಕೆ ಹೋಲಿಸೋಣ? ಯಾವ ಸಾಮ್ಯದಿಂದ ಅದನ್ನು ತೋರಿಸಿಕೊಡೋಣ?
31ಅದು ಸಾಸಿವೆ ಕಾಳಿನಂತಿರುತ್ತದೆ. ನೆಲದಲ್ಲಿ ಬಿತ್ತುವಾಗ ಅದು ಭೂಮಿಯಲ್ಲಿರುವ ಎಲ್ಲಾ ಬೀಜಗಳಿಗಿಂತಲೂ ಸಣ್ಣದಾಗಿದೆ.
32ಬಿತ್ತಿದ ಮೇಲೆ ಅದು ಬೆಳೆದು ಎಲ್ಲಾ ಗಿಡಗಳಿಗಿಂತ ದೊಡ್ಡದಾಗಿ ದೊಡ್ಡದೊಡ್ಡ ಕೊಂಬೆಗಳನ್ನು ಬಿಡುವುದರಿಂದ ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಅದರ ನೆರಳಿನಲ್ಲಿ ವಾಸಮಾಡುವುದಕ್ಕಾಗುತ್ತದೆ” ಅಂದನು.
33ಆತನು ಈ ರೀತಿಯ ಅನೇಕ ಸಾಮ್ಯಗಳಿಂದ ಜನರಿಗೆ ಅರ್ಥವಾಗುವ ಹಾಗೆ ದೇವರ ವಾಕ್ಯವನ್ನು ಹೇಳುತ್ತಿದ್ದನು.

Read ಮಾರ್ಕ 4ಮಾರ್ಕ 4
Compare ಮಾರ್ಕ 4:23-33ಮಾರ್ಕ 4:23-33